ಭಾರತದಲ್ಲಿ 62,714 ಹೊಸ ಕೋವಿಡ್ ಪ್ರಕರಣ ದಾಖಲು
ನವದೆಹಲಿ, ಮಾರ್ಚ್ 28: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 62,714 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಯಲ್ಲಿ 28,739 ಜನರು ಗುಣಮುಖಗೊಂಡಿದ್ದಾರೆ, 312 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ.
ಮಾರ್ಚ್ 27ರ ಶನಿವಾರದ ತನಕ ದೇಶದಲ್ಲಿ 24,09,50,842 ಮಾದರಿಗಳ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ. ಶನಿವಾರ 11,81,289 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ಭಾರತದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,86,310. ಒಟ್ಟು ಮೃತಪಟ್ಟವರ ಸಂಖ್ಯೆ 1,61,552 ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಯಾವ ರಾಜ್ಯದಲ್ಲಿ ಎಷ್ಟು?; ಮಹಾರಾಷ್ಟ್ರ ರಾಜ್ಯದಲ್ಲಿ 35,726 ಹೊಸ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳು 3,03,475.
ಕೇರಳದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,15,778ಕ್ಕೆ ಏರಿಕೆಯಾಗಿದೆ. ಶನಿವಾರ ರಾಜ್ಯದಲ್ಲಿ 2,055. ಸಕ್ರಿಯ ಪ್ರಕರಣಗಳು 24,227.
ಕರ್ನಾಟಕದಲ್ಲಿ ಶನಿವಾರ 2,886 ಹೊಸ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 21,252.












Click it and Unblock the Notifications