ಭಾರತದಲ್ಲಿ ಇಂದು 63,371 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಅಕ್ಟೋಬರ್ 16: ಭಾರತದಲ್ಲಿ ಇಂದು 63,371 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನ 895 ಮಂದಿ ಸಾವನ್ನಪ್ಪಿದ್ದಾರೆ.
73,70,469 ಪ್ರಕರಣಗಳಿವೆ, 8,04,528 ಸಕ್ರಿಯ ಪ್ರಕರಣಗಳಿವೆ. 64,53,780 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,12,161 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಗುರುವಾರ 67,708 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. ಒಂದೇ ದಿನದಲ್ಲಿ 680 ಮಂದಿ ಸಾವನ್ನಪ್ಪಿದ್ದರು.ಮುಂದಿನ 6 ತಿಂಗಳಲ್ಲಿ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಭಾರತೀಯ ರೆಡ್‌ಕ್ರಾಸ್ ಸೊಸೈಟಿ (ಐಆರ್‌ಸಿಎಸ್) ಮತ್ತು ಸೇಂಟ್ ಜಾನ್ಸ್ ಆಂಬ್ಯುಲೆನ್ಸ್‌ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಗತ್ತಿನ ಇತರೆ ದೇಶಗಳಂತೆಯೇ ಭಾರತ ಕೂಡ ಕೊರೋನಾ ವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ.
ಭಾರತ ಇನ್ನು ಕೆಲವೇ ತಿಂಗಳುಗಳ ಅಂತರದಲ್ಲಿ ಕೊರೊನಾ ವ್ಯಾಕ್ಸಿನ್ ಹೊಂದುವ ನಿರೀಕ್ಷೆ ಇದ್ದು, ಮುಂದಿನ ಆರು ತಿಂಗಳಲ್ಲಿ ವ್ಯಾಕ್ಸಿನ್ ಅನ್ನು ದೇಶಾದ್ಯಂತ ವಿತರಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.












Click it and Unblock the Notifications