ಭಾರತದಲ್ಲಿ 24 ಗಂಟೆಗಳಲ್ಲೇ 1007 ಜನರ ಬಲಿ ತೆಗೆದುಕೊಂಡ ಕೊರೊನಾವೈರಸ್
ನವದೆಹಲಿ, ಆಗಸ್ಟ್.13: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 60,000 ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲೇ 64553 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಈಗಾಗಲೇ 2461191ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಂದೇ ದಿನ ಕೊವಿಡ್-19 ಮಹಾಮಾರಿಗೆ 1007 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 48040ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಇದುವರೆಗೂ ಪತ್ತೆಯಾಗಿರುವ ಒಟ್ಟು 2461191 ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ 1751556 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ 6,61,595 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

24 ಗಂಟೆಗಳಲ್ಲೇ 8,48,728 ಜನರಿಗೆ ಕೊವಿಡ್-19 ತಪಾಸಣೆ:
ಭಾರತದಲ್ಲಿ ಆಗಸ್ಟ್.13ರ ಅಂಕಿ-ಅಂಶಗಳಿಗೆ ಸಂಬಂಧಿಸಿದಂತೆ ಇದುವರೆಗೂ 2,76,94,416 ಜನರನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 8,48,728 ಜನರ ರಕ್ತೆ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಮಾಹಿತಿ ನೀಡಿದೆ.
ವಿಶ್ವದಲ್ಲಿ ಇದುವರೆಗೂ 2,10,68,344 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಮಹಾಮಾರಿಗೆ ಇದುವರೆಗೂ ಪ್ರಾಣ ಬಿಟ್ಟವರ ಸಂಖ್ಯೆ 757440ಕ್ಕೆ ಏರಿಕೆಯಾಗಿದೆ. ಇನ್ನು, 1,39,17,952 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications