ಭಾರತದಲ್ಲಿ ಒಂದೇ ದಿನ 66,999 ಮಂದಿಗೆ ಕೊರೊನಾವೈರಸ್ ಪಾಸಿಟಿವ್

ನವದೆಹಲಿ, ಆಗಸ್ಟ್.13: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಅಟ್ಟಹಾಸ ಮುಂದುವರಿದಿದೆ. ವಿಶ್ವದಲ್ಲೇ ಅತಿಹೆಚ್ಚು ಸೋಂಕಿತ ಪ್ರರಕಣಗಳು ಪ್ರತಿನಿತ್ಯ ಭಾರತದಲ್ಲಿಯೇ ವರದಿಯಾಗುತ್ತಿವೆ. ಕಳೆದ 24 ಗಂಟೆಗಳಲ್ಲೇ ದೇಶದಲ್ಲಿ 66999 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಈಗಾಗಲೇ 2396638ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಂದೇ ದಿನ ಕೊವಿಡ್-19 ಮಹಾಮಾರಿಗೆ 942 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 47033ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇದುವರೆಗೂ ಪತ್ತೆಯಾಗಿರುವ ಒಟ್ಟು 2396638 ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ 1695982 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ 6,53,622 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

66999 New Coronavirus Cases And 942 Deaths Reported In India In Last 24 Hours

24 ಗಂಟೆಗಳಲ್ಲೇ 8,30,391 ಜನರಿಗೆ ಕೊವಿಡ್-19 ತಪಾಸಣೆ:

ಭಾರತದಲ್ಲಿ ಆಗಸ್ಟ್.12ರ ಅಂಕಿ-ಅಂಶಗಳಿಗೆ ಸಂಬಂಧಿಸಿದಂತೆ ಇದುವರೆಗೂ 2,68,45,688 ಜನರನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 8,30,391 ಜನರ ರಕ್ತೆ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಮಾಹಿತಿ ನೀಡಿದೆ.

ವಿಶ್ವದಲ್ಲಿ ಇದುವರೆಗೂ 2,08,06,973 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಮಹಾಮಾರಿಗೆ ಇದುವರೆಗೂ ಪ್ರಾಣ ಬಿಟ್ಟವರ ಸಂಖ್ಯೆ 747258ಕ್ಕೆ ಏರಿಕೆಯಾಗಿದೆ. ಇನ್ನು, 1,37,06,688 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+