ಭಾರತದಲ್ಲಿ 24 ಗಂಟೆಗಳಲ್ಲೇ ಕೊರೊನಾವೈರಸ್ ಗೆ 1059 ಜನ ಬಲಿ!

ನವದೆಹಲಿ, ಆಗಸ್ಟ್.26: ಕೊರೊನಾವೈರಸ್ ಸೋಂಕಿನ ಅಟ್ಟಹಾಸವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುಣಮುಖ ಪ್ರಕರಣಗಳು ಹೆಚ್ಚಾಗುವುತ್ತಿರುವುದು ಒಂದು ಕಡೆಯಾದರೆ ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 1059 ಜನರು ಪ್ರಾಣ ಬಿಟ್ಟಿದ್ದಾರೆ.

Recommended Video

      ಕೊನೆಗೂ Africa , Polioದಿಂದ ಮುಕ್ತ | Oneindia Kannada

      ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆಯು 59449ಕ್ಕೆ ಏರಿಕೆಯಾಗಿದೆ. ಒಂದೇ ದಿನ 67151 ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 3234475ಕ್ಕೆ ಏರಿಕೆಯಾಗಿದೆ.

      ಭಾರತದಲ್ಲಿ ಒಟ್ಟು 3234475 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 24,67,759 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,07,267 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

      67151 New Covid-19 Cases And 1059 Deaths Reported In India In Last 24 Hours

      3,68,27,520 ಜನರಿಗೆ ಕೊರೊನಾವೈರಸ್ ಪರೀಕ್ಷೆ:

      ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 3,76,51,512 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,23,992 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ತಪಾಸಣೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

      ವಿಶ್ವದಲ್ಲಿ 2,40,58,358 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ ಜಗತ್ತಿನಲ್ಲಿ 8,23,510 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,66,08,068 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+