ಭಾರತದಲ್ಲಿ 71 ದಿನಗಳ ಬಳಿಕ ಕಡಿಮೆ ಸಕ್ರಿಯ ಕೊರೊನಾ ಪ್ರಕರಣಗಳು ಪತ್ತೆ

ನವದೆಹಲಿ, ಜೂನ್ 17: ಭಾರತದಲ್ಲಿ 71 ದಿನಗಳ ಬಳಿಕ ಕಡಿಮೆ ಸಕ್ರಿಯ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 67,208 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 2330 ಮಂದಿ ಮೃತಪಟ್ಟಿದ್ದಾರೆ.

ಇದುವರೆಗೆ ಒಟ್ಟು 2,97,00,313 ಪ್ರಕರಣಗಳಿವೆ, ಒಂದೇ ದಿನದಲ್ಲಿ 1,03,570 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇಲ್ಲಿಯವರೆಗೆ 2,84,91,670 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. 3,81,903 ಮಂದಿ ಮೃತಪಟ್ಟಿದ್ದಾರೆ. 8,26,740 ಸಕ್ರಿಯ ಪ್ರಕರಣಗಳಿವೆ ಇದು 71ದಿನಗಳಲ್ಲೇ ಪತ್ತೆಯಾದ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ.

26,55,19,251 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೆ 38,52,38,220 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಜೂನ್ 16ರಂದು ಒಂದೇ ದಿನ 19,31,249 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

67,208 New Coronavirus Cases Reported In India In Last 24 Hours

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+