ಮತ್ತೆ ಕೊರೊನಾ ಹಾಟ್‌ಸ್ಪಾಟ್‌ನತ್ತ ಭಾರತ: ಒಂದೇ ದಿನ 68,020 ಹೊಸ ಪ್ರಕರಣ ಪತ್ತೆ
ನವದೆಹಲಿ, ಮಾರ್ಚ್ 29: ದೇಶದಲ್ಲಿ ಕೊರೊನಾ ವೈರಸ್ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ವೈರಸ್ ವೇಗಕ್ಕೆ ಭಾರತ ದೇಶವೇ ತತ್ತರಿಸಿ ಹೋಗುತ್ತಿದೆ. ಕಳೆದ 8 ದಿನಗಳಲ್ಲಿ 2.5 ಲಕ್ಷಕ್ಕೂ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 68,020 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ಆರೋಗ್ಯ ಇಲಾಖೆಯ ವರದಿಯ ಪ್ರಕಾರ ಭಾನುವಾರದ ಕೊರೊನಾ ಸೋಂಕಿತರಲ್ಲಿ 32,231 ಜನರು ಚೇತರಿಸಿಕೊಂಡಿದ್ದರೆ, 291 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ವರದಿಯಲ್ಲಿದೆ.

ಈ ಮೂಲಕ ಭಾರತ ದೇಶದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 1,20,39,644ಕ್ಕೆ ಏರಿದ್ದರೆ, 1,13,55,993 ಪ್ರಕರಣಗಳು ಚೇತರಿಕೆ ಕಂಡಿವೆ.
ಈವರೆಗೆ ಭಾರತದಲ್ಲಿ 1,61,843 ಸೋಂಕಿತರು ಸಾವನ್ನಪ್ಪಿದ್ದು, ಇನ್ನೂ 5,21,808 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಮಾ.೨೮ ರವರೆಗೆ 6,05,30,435 ಕೋಟಿ ಜನರಿಗೆ ಕೊರೊನಾ ಲಸಿಕೆ ಪ್ರಮಾಣವನ್ನು ನೀಡಲಾಗಿದೆ.












Click it and Unblock the Notifications