ಚಿತ್ರಗಳಲ್ಲಿ ನೋಡಿ ಸ್ವಾತಂತ್ರೋತ್ಸವ ಸಂಭ್ರಮ, ಸಡಗರ
ನವದೆಹಲಿ, ಆ.15 : ಸಂಭ್ರಮ, ಸಡಗರ, ಅಭೂತಪೂರ್ವ ಭದ್ರತೆಯ ನಡುವೆ ದೇಶಾದ್ಯಂತ ಶುಕ್ರವಾರ 68ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನವದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಮುಖ್ಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿದರು.
ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಬಡತನ, ಸ್ವಚ್ಛತೆ, ಆಮದು, ರಫ್ತುಗಳ ಕುರಿತು ಮಾತನಾಡಿದ ಮೋದಿ, ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯಿರಿ ಎಂದು ಕರೆ ನೀಡಿದರು. [ಮೋದಿ ಭಾಷಣದ ಮುಖ್ಯಾಂಶಗಳು ಇಲ್ಲಿವೆ]
ಎಲ್ಲಾ ರಾಜ್ಯಗಳಲ್ಲಿ ನಡೆದ ಮುಖ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡಿ, ರಕ್ಷಣಾ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ಶಾಲಾ ಮಕ್ಕಳು ಹಾಡು, ನೃತ್ಯ ಸ್ವಾತಂತ್ರ್ಯ ದಿನಾಚರಣೆಯ ರಂಗನ್ನು ಮತ್ತಷ್ಟು ಹೆಚ್ಚಿಸಿತ್ತು. ದೇಶಾದ್ಯಂತ ನಡೆದ ಸ್ವಾತಂತ್ರ್ಯೋತ್ಸವ ಆಚರಣೆ ಚಿತ್ರಗಳು ಇಲ್ಲಿವೆ. [ಪಿಟಿಐ ಚಿತ್ರಗಳು]

ಮೋದಿಯಿಂದ ಧ್ವಜಾರೋಹಣ
ನವದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು.

ಪಟಿಯಾಲಾದಲ್ಲಿ ಯುವತಿಯರ ಸಂಭ್ರಮ
ಪಂಜಾಬ್ ರಾಜ್ಯದ ಪಟಿಯಾಲಾದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಯುವತಿಯ ಸಂಭ್ರಮ.

ಗೌಹಾತಿಯಲ್ಲಿ ಗಮನ ಸೆಳೆದ ಮಕ್ಕಳ ನೃತ್ಯ
ಗೌಹಾತಿಯಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಕ್ಕಳು ಪ್ರದರ್ಶಿಸಿದ ನೃತ್ಯ ಎಲ್ಲರ ಗಮನ ಮೆಚ್ಚುಗೆಗೆ ಪಾತ್ರವಾಯಿತು.

ಗೌರವವಂದನೆ ಸ್ವೀಕರಿಸಿದ ಸಿಎಂ
ಭೋಪಾಲ್‌ನಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಗೌರವವಂದನೆ ಸ್ವೀಕರಿಸಿದರು.

ಟೆನಿಸ್ ತಾರೆಗೆ ಸನ್ಮಾನ
ಹೈದರಾಬಾದ್ ನಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ತೆಲಂಗಾಣಾ ಮುಖ್ಯಮಂತ್ರಿ ಚಂದ್ರಶೇಖರರಾವ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರನ್ನು ಸನ್ಮಾನಿಸಿದರು.

ಕೆಂಪುಕೋಟೆಯಲ್ಲಿ ಮಕ್ಕಳ ಸಂಭ್ರಮ
ನವದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಕ್ಕಳು ಸಂಭ್ರಮಿಸಿದ್ದು ಹೀಗೆ.

ಗಡಿಯಲ್ಲಿ ಸೈನಿಕರ ಸಂಭ್ರಮ
ಭಾರತ ಮತ್ತು ಪಾಕಿಸ್ತಾನದ ಗಡಿಭಾಗವಾದ ಅಟಾರಿಯಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸೈನಿಕರು ಸಂಭ್ರಮಿಸಿದ್ದು ಕ್ಯಾಮರಾ ಕಣ್ಣಿಗೆ ಸೆರೆ ಸಿಕ್ಕಿತು.

ಮುಖ್ಯಮಂತ್ರಿಯಿಂದ ಧ್ವಜಾರೋಹಣ
ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಸ್ವಾತಂತ್ರೋತ್ಸವದಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಧ್ವಜಾರೋಹಣ ಮಾಡಿದರು.

ಬೆಂಗಳೂರಿನಲ್ಲಿ ಗಮನ ಸೆಳೆದ ಮಕ್ಕಳ ನೃತ್ಯ
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ನೃತ್ಯ ಪ್ರದರ್ಶಿಸಿದರು.

ಮುಖ್ಯಮಂತ್ರಿಗೆ ಗೌರವವಂದನೆ
ಪಟಿಯಾಲಾದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಗೌರವವಂದನೆ ಸ್ವೀಕರಿಸಿದರು.

ಸೋನಿಯಾ ಗಾಂಧಿ ಅವರಿಂದ ಧ್ವಜಾರೋಹಣ
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸ್ವಾತಂತ್ರೋತ್ಸವದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧ್ವಜಾರೋಹಣ ನೆರವೇರಿಸಿದರು.

ಕಾಶ್ಮೀರದಲ್ಲಿ ಸ್ವಾತಂತ್ರೋತ್ಸವ ಸಂಭ್ರಮ
ಜಮ್ಮ ಮತ್ತು ಕಾಶ್ಮೀರದಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಗೌರವ ವಂದನೆ ಸ್ವೀಕರಿಸಿದರು.

ಚೆನ್ನೈನಲ್ಲಿ ಸ್ವಾತಂತ್ರೋತ್ಸವ ಆಚರಣೆ
ಚೆನ್ನೈನಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಜಯಲಿಲಿತಾ ಭಾಗವಹಿಸಿದ್ದರು.

ಕೋಲ್ಕತ್ತಾದಲ್ಲಿ ಸ್ವಾತಂತ್ರೋತ್ಸವ ಆಚರಣೆ
ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದರು.

ಪ್ರಶಸ್ತಿ ಗೆದ್ದ ಸಂತಸ
ಗೌಹಾತಿಯಲ್ಲಿ ನಡೆದಸ್ವಾತಂತ್ರೋತ್ಸವ ಪರೇಡ್ ನಲ್ಲಿ ಪ್ರಶಸ್ತಿಗಳಿಸಿದ Personnel of Central Reserve Police Force (CRPF) 128 ಬೆಟಾಲಿಯನ್ ಸಂಭ್ರಮ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications