ಭಾರತದಲ್ಲಿ 29 ಲಕ್ಷದ ಗಡಿ ದಾಟಿತು ಕೊವಿಡ್-19 ಪ್ರಕರಣಗಳ ಸಂಖ್ಯೆ!

ನವದೆಹಲಿ, ಆಗಸ್ಟ್.21: ಭಾರತದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲೇ 68898 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ.

Recommended Video

      ಪಬ್ ವಿಚಾರ CM ಹತ್ರ ಮಾತಾಡ್ತೀನಿ | Oneindia Kannada

      ಗುರುವಾರ ಬೆಳಗ್ಗೆ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 983 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಮಹಾಮಾರಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 54849ಕ್ಕೆ ಏರಿಕೆಯಾಗಿದೆ.

      ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 2905824ಕ್ಕೆ ಏರಿಕೆಯಾಗಿದೆ. ಈ ಪೈಕಿ 2158947 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 692028 ಸಕ್ರಿಯ ಪ್ರಕರಣಗಳು ಇರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

      68898 New Covid-19 Cases And 983 Deaths Reported In India In The Last 24 Hours


      ಭಾರತದಲ್ಲಿ ಒಂದೇ ದಿನ 8 ಲಕ್ಷ ಜನರಿಗೆ ಕೊವಿಡ್ ತಪಾಸಣೆ:

      ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 8,05,985 ಜನರನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ. ಭಾರತದಲ್ಲಿ ಇದುವರೆಗೂ 3,34,67,237 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಮಾಹಿತಿ ನೀಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+