ಭಾರತದಲ್ಲಿ ಒಂದೇ ದಿನ 92 ಲಕ್ಷ ಮಂದಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಸಪ್ಟೆಂಬರ್ 6: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಪ್ರತಿನಿತ್ಯ ಒಂದೊಂದು ದಾಖಲೆ ನಿರ್ಮಾಣವಾಗುತ್ತಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 92 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 234 ದಿನಗಳಾಗಿದೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 92,00,822 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈ ಪೈಕಿ 64,30,173 ಮಂದಿಗೆ ಮೊದಲ ಡೋಸ್ ಹಾಗೂ 27,70,649 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಭಾರತದಲ್ಲಿ ಈವರೆಗೂ 69,68,96,328 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 68,04,93,215 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

69.68 Crore Beneficiaries Got Vaccinated Against Coronavirus Across India

ಯಾವ ಹಂತದವರಿಗೆ ಎಷ್ಟು ಲಸಿಕೆ ವಿತರಣೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,61,343 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 84,96,682 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,31,096 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,36,48,605 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 53,29,27,201 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 16,39,69,127 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ನಾಲ್ಕು ಹಂತದಲ್ಲಿ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?

2021ರ ಸೆಪ್ಟೆಂಬರ್ 6ರ ಅಂಕಿ-ಅಂಶಗಳ ಪ್ರಕಾರ, 68,04,93,215 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 68,04,93,215

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,44,80,110

* ಕೊವಿಡ್-19 ಲಸಿಕೆಯ ಲಭ್ಯತೆ - 5,08,76,490

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+