ಭಾರತದಲ್ಲಿ 24 ಗಂಟೆಗಳಲ್ಲೇ 69652 ಮಂದಿಗೆ ಕೊರೊನಾವೈರಸ್ ಪಾಸಿಟಿವ್!
ನವದೆಹಲಿ, ಆಗಸ್ಟ್.20: ನೊವೆಲ್ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೊಂದು ದಾಖಲೆಯ ಏರಿಕೆ ಕಂಡು ಬಂದಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 69652 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
Recommended Video
ಬುಧವಾರ ಬೆಳಗ್ಗೆ 9 ಗಂಟೆಯಿಂದ ಗುರುವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 977 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 53866ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 2836926ಕ್ಕೆ ಏರಿಕೆಯಾಗಿದೆ. ಈ ಪೈಕಿ 2096665 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 686395 ಸಕ್ರಿಯ ಪ್ರಕರಣಗಳು ಇರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಭಾರತದಲ್ಲಿ ಹೆಚ್ಚಿದ ಕೊವಿಡ್-19 ತಪಾಸಣೆ ವೇಗ:
ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 9,18,470 ಜನರನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ. ಭಾರತದಲ್ಲಿ ಇದುವರೆಗೂ 3,26,61,252 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಮಾಹಿತಿ ನೀಡಿದೆ.












Click it and Unblock the Notifications