ಭಾರತದಲ್ಲಿ ಒಂದೇ ದಿನ 69,921 ಕೊರೊನಾ ಸೋಂಕಿತರು ಪತ್ತೆ
ನವೆಹಲಿ, ಸೆಪ್ಟೆಂಬರ್ 1: ಭಾರತದಲ್ಲಿ 24 ಗಂಟೆಯಲ್ಲಿ 69,921 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
Recommended Video
ಒಂದೇ ದಿನ 819 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 36,91,167 ಪ್ರಕರಣಗಳಿವೆ, 7,85,996 ಸಕ್ರಿಯ ಪ್ರಕರಣಗಳಿವೆ. 28,39,883 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 5,288 ಮಂದಿ ಸಾವನ್ನಪ್ಪಿದ್ದಾರೆ.
ವಿಶ್ವದಲ್ಲಿ 2,53,87,142 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿಗೆ ಇದುವರೆಗೂ ಜಗತ್ತಿನಲ್ಲಿ 8,50,598 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,77,08,854 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ನಿನ್ನೆ ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 36 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 78512 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸೋಮವಾರ ಬೆಳಗ್ಗೆ 10 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 971 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 64469ಕ್ಕೆ ಏರಿಕೆಯಾಗಿದೆ.












Click it and Unblock the Notifications