India Corona Report: ಒಂದೇ ದಿನದಲ್ಲಿ 7,633 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಬೆಂಗಳೂರು, ಏಪ್ರಿಲ್‌ 18: ಭಾರತದಲ್ಲಿ ಮತ್ತೆ ಕೊರೊನಾ ಸೋಂಕು ಹರಡುತ್ತಿದ್ದು, ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆ ಕಾಣುತ್ತಿದೆ. ಕಳೆದ 24 ಗಂಟೆಗಳಲ್ಲಿ 7,633 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದಿನನಿತ್ಯದ ಪಾಸಿಟಿವ್ ದರ 3.62% ತಲುಪಿದೆ. ಒಂದು ವಾರದ ಪಾಸಿಟಿವ್ ದರ 5.04% ತಲುಪಿದೆ.

ಈ ನೂತನ ಪಾಸಿಟಿವ್ ಪ್ರಕರಣಗಳಿಂದಾಗಿ ದೇಶದಲ್ಲಿನ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 61,233ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 6,702 ಜನ ಕೊರೊನಾ ಸೋಂಕಿತರು ಗುಣ ಮುಖರಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 4,42,42,474 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

7,633 New Cases Of Covid 19 Recorded In India

ಇನ್ನು ಕಳೆದ 24 ಗಂಟೆಗಳಲ್ಲಿ 2,11,029 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, 7,633 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಈವರೆಗೆ ದೇಶದಲ್ಲಿ 92.43ಕ್ಕೂ ಹೆಚ್ಚು ಕೋಟಿ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಕರ್ನಾಟಕ ಕೋವಿಡ್‌ ಪ್ರಕರಣಗಳ ವಿವರ

ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 358 ಹೊಸ ಕೋವಿಡ್ ಪ್ರಕರಣಗಳೂ ಪತ್ತೆಯಾಗಿವೆ. ಈ ನೂತನ ಪಾಸಿಟಿವ್‌ ಪ್ರಕರಣಗಳ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1904ಕ್ಕೆ ಏರಿಕೆ ಆಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,82,425 ಕೊರೊನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾದಿಂದಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ ಈವರೆಗೆ ಒಟ್ಟು 40,294 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

7,633 New Cases Of Covid 19 Recorded In India

ಇನ್ನು ರಾಜ್ಯದದಲ್ಲಿ ಒಂದೇ ದಿನ 529 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 40,82,425 ಕೊರೊನಾ ಪ್ರಕರಣಗಳಲ್ಲಿ 40,40,125 ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+