ಪ್ರಶ್ನೆ ಪತ್ರಿಕೆಯಲ್ಲಿನ ತಪ್ಪುಗಳನ್ನು ತಿಳಿಸಲು 7 ದಿನ ಅವಕಾಶ: UPSC
ನವದೆಹಲಿ, ನವೆಂಬರ್ 15: ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳಲ್ಲಿ ಯಾವುದೇ ಲೋಪಗಳು ಕಂಡುಬಂದಲ್ಲಿ ಏಳು ದಿನಗಳ ಒಳಗಾಗಿ ಆಯೋಗದ ಗಮನಕ್ಕೆ ತರಬೇಕು ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಅಭ್ಯರ್ಥಿಗಳಿಗೆ ತಿಳಿಸಿದೆ.
ನಾಗರಿಕ ಸೇವಾ ಪರೀಕ್ಷೆಗಳೂ ಸೇರಿದಂತೆ ಆಯೋಗವು ನಡೆಸುವ ಹಲವಾರು ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳಲ್ಲಿ ತಪ್ಪುಗಳು ಇದ್ದಲ್ಲಿ ಅಭ್ಯರ್ಥಿಗಳು ಏಳು ದಿನಗಳ ಒಳಗೆ ತಿಳಿಸಬೇಕು. 7 ದಿನಗಳ ಬಳಿಕ ಬಂದ ಯಾವುದೇ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೇಂದ್ರ ಲೋಕಸೇವಾ ಆಯೋಗ ಹೇಳಿದೆ.

ಪ್ರಶ್ನೆ ಪತ್ರಿಕೆಗಳಲ್ಲಿನ ಲೋಪಗಳನ್ನು ತಿಳಿಸಲು ಪ್ರತಿ ಪರೀಕ್ಷೆ ನಡೆದ ಮರುದಿನದಿಂದ ಆರು ದಿನಗಳ ಕಾಲಾವಕಾಶ ನೀಡಲಾಗಿದೆ. ಆಯೋಗದ ಅಧಿಕೃತ ಜಾಲತಾಣ [email protected] ಮೂಲಕ ಮಾತ್ರ ಅಭ್ಯರ್ಥಿಗಳು ದೂರು ಸಲ್ಲಿಸಬೇಕು. ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಆಯೋಗ ಹೇಳಿದೆ.











Click it and Unblock the Notifications