ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಶ್ನೆ ಪತ್ರಿಕೆಯಲ್ಲಿನ ತಪ್ಪುಗಳನ್ನು ತಿಳಿಸಲು 7 ದಿನ ಅವಕಾಶ: UPSC

|
Google Oneindia Kannada News

ನವದೆಹಲಿ, ನವೆಂಬರ್ 15: ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳಲ್ಲಿ ಯಾವುದೇ ಲೋಪಗಳು ಕಂಡುಬಂದಲ್ಲಿ ಏಳು ದಿನಗಳ ಒಳಗಾಗಿ ಆಯೋಗದ ಗಮನಕ್ಕೆ ತರಬೇಕು ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಅಭ್ಯರ್ಥಿಗಳಿಗೆ ತಿಳಿಸಿದೆ.

ನಾಗರಿಕ ಸೇವಾ ಪರೀಕ್ಷೆಗಳೂ ಸೇರಿದಂತೆ ಆಯೋಗವು ನಡೆಸುವ ಹಲವಾರು ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳಲ್ಲಿ ತಪ್ಪುಗಳು ಇದ್ದಲ್ಲಿ ಅಭ್ಯರ್ಥಿಗಳು ಏಳು ದಿನಗಳ ಒಳಗೆ ತಿಳಿಸಬೇಕು. 7 ದಿನಗಳ ಬಳಿಕ ಬಂದ ಯಾವುದೇ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೇಂದ್ರ ಲೋಕಸೇವಾ ಆಯೋಗ ಹೇಳಿದೆ.

7-day time frame for reporting discrepancies in exam papers: UPSC

ಪ್ರಶ್ನೆ ಪತ್ರಿಕೆಗಳಲ್ಲಿನ ಲೋಪಗಳನ್ನು ತಿಳಿಸಲು ಪ್ರತಿ ಪರೀಕ್ಷೆ ನಡೆದ ಮರುದಿನದಿಂದ ಆರು ದಿನಗಳ ಕಾಲಾವಕಾಶ ನೀಡಲಾಗಿದೆ. ಆಯೋಗದ ಅಧಿಕೃತ ಜಾಲತಾಣ [email protected] ಮೂಲಕ ಮಾತ್ರ ಅಭ್ಯರ್ಥಿಗಳು ದೂರು ಸಲ್ಲಿಸಬೇಕು. ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಆಯೋಗ ಹೇಳಿದೆ.

English summary
The Union Public Service Commission (UPSC) has fixed a seven-day time frame for candidates to report mistakes or discrepancies in questions asked in the various examinations conducted by it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X