ಕೊರೊನಾ ಭೀತಿಯಲ್ಲಿ ಮನೆಗೆ ಹೊರಟವರು ಸೇರಿದ್ದು ಮಸಣ

ನವದೆಹಲಿ, ಮೇ.19: ನೊವೆಲ್ ಕೊರೊನಾ ವೈರಸ್ ಭೀತಿ ಹಾಗೂ ಭಾರತ ಲಾಕ್ ಡೌನ್ ಸೃಷ್ಟಿಸಿದ ಸಂದಿಗ್ಘತೆಯಿಂದ ತಮ್ಮೂರಿನತ್ತ ಮುಖ ಮಾಡಿದ ನಾಲ್ವರು ವಲಸೆ ಕಾರ್ಮಿಕರು ನಡುರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದಾರೆ. ಬೆಳ್ಳಂಬೆಳಗ್ಗೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಏಳು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಜಾನ್ಸಿ-ಮಿರ್ಜಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಹೊರಟಿದ್ದ ಡಿಸಿಎಂ ವಾಹನ(ದೆಹಲಿ ಕ್ಲಾತ್ ಆಂಡ್ ಜನರಲ್ ಮಿಲ್) ಉರುಳಿ ಬಿದ್ದಿದೆ. 17 ಪ್ರಯಾಣಿಕರನ್ನು ತುಂಬಿಕೊಂಡಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Two Separate Accident: 7 Migrate Workers Death, 27 Are injured

ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದರೆ, 12 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಟ್ರಕ್ ನಡುವೆ ಡಿಕ್ಕಿ ನಾಲ್ವರು ಸಾವು:

ಮಹಾರಾಷ್ಟ್ರದ ಸೊಲ್ಲಾಪುರ್ ನಿಂದ ಜಾರ್ಖಂಡ್ ಗೆ ಹೊರಟಿದ್ದ ಬಸ್ ಮತ್ತು ಟ್ರಕ್ ನಡುವೆ ಯವತ್ಮಲ್ ಬಳಿ ಅಪಘಾತ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬಸ್ ನಲ್ಲಿದ್ದ ನಾಲ್ವರು ವಲಸೆ ಕಾರ್ಮಿಕರು ಪ್ರಾಣ ಬಿಟ್ಟಿದ್ದರೆ, 15 ಮಂದಿ ಗಾಯಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+