ಸಿಬ್ಬಂದಿಗಳಿಗೆ ಮೆಣಸಿನಪುಡಿ ಎರಚಿ ಜೈಲಿನಿಂದ ಪರಾರಿಯಾದ 7 ಕೈದಿಗಳು!
ಇಟಾನಗರ, ಜು.13: ಅರುಣಾಚಲ ಪ್ರದೇಶದ ಜೈಲಿನಿಂದ ಏಳು ಕೈದಿಗಳು ಮೆಣಸಿನಕಾಯಿ ಪುಡಿ, ಕರಿ ಮೆಣಸಿನ ಪುಡಿ, ಉಪ್ಪನ್ನು ಜೈಲಿನ ಕಾವಲುಗಾರರಿಗೆ ಎಸೆದು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಭಾನುವಾರ ರಾಜ್ಯದ ಪೂರ್ವ ಸಿಯಾಂಗ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಇನ್ನು ಈ ಕೈದಿಗಳು ತಪ್ಪಿಸುವ ವೇಳೆ ಕನಿಷ್ಠ ಐದು ಮಂದಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಸಿಬ್ಬಂದಿಗಳಿಗೆ ಗಾಯಗಳಾಗಿವೆ.
ಈ ಕೈದಿಗಳು ತಪ್ಪಿಸಿಕೊಳ್ಳಲು ಮುಂಚಿತವಾಗಿಯೇ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ. ಈ ಏಳು ಕೈದಿಗಳನ್ನು ಅಭಿಜಿತ್ ಗೊಗೊಯ್, ತಾರೋ ಹಮಾಮ್, ಕಲೋಮ್ ಅಪಾಂಗ್, ತಾಲೂಮ್ ಪ್ಯಾನಿಂಗ್, ಸುಬಾಶ್ ಮೊಂಡಾಲ್, ರಾಜಾ ತೆಯೆಂಗ್, ಮತ್ತು ಡ್ಯಾನಿ ಗಮ್ಲಿನಾ ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಏಳು ಮಂದಿ ಕೈದಿಗಳು ಒಂದೇ ಸ್ಥಳದಲ್ಲಿ ಇದ್ದರು. ಊಟಕ್ಕೆ ಸೆಲ್ ತೆರೆದ ಸಂದರ್ಭದಲ್ಲಿ ಜೈಲಿನಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದೆ.
''ಘಟನೆಯಲ್ಲಿ ಐದು ಮಂದಿ ಜೈಲಿನ ಸಿಬ್ಬಂದಿಗಳಿಗೆ ಗಾಯವಾಗಿದೆ. ಈ ಪೈಕಿ ಓರ್ವನ ತಲೆಗೆ ತೀವ್ರವಾಗಿ ಗಾಯವಾಗಿದೆ. ಸೆಲ್‌ನ ಭಾರವಾದ ಬೀಗದಿಂದ ಹೊಡೆದಿರಬಹುದು. ಸಿಬ್ಬಂದಿಯ ಮೊಬೈಲ್ ಫೋನ್ ಕೂಡಾ ಕೈದಿಗಳು ಕಸಿದುಕೊಂಡಿದ್ದಾರೆ,'' ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಚುಖು ಅಪಾ ಪಿಟಿಐಗೆ ತಿಳಿಸಿದ್ದಾರೆ.
ಇನ್ನು ''ಜೈಲಿನಿಂದ ಪರಾರಿಯಾದವರ ಪತ್ತೆ ಕಾರ್ಯವನ್ನು ಪ್ರಾರಂಭಿಸಲಾಗಿದೆ,'' ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ''ಇಂಡಿಯಾ ರಿಸರ್ವ್ ಬೆಟಾಲಿಯನ್‌ನ ಪೊಲೀಸರು ಮತ್ತು ಸಿಬ್ಬಂದಿಗಳು ಪೂರ್ವ ಸಿಯಾಂಗ್ ಪಟ್ಟಣದಲ್ಲಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಎಲ್ಲಾ ನಿರ್ಗಮನ ಸ್ಥಳಗಳನ್ನು ಬಂದ್ ಮಾಡಲಾಗಿದೆ. ನಾವು ಶೀಘ್ರದಲ್ಲೇ ಈ ಕೈದಿಗಳನ್ನು ವಶಕ್ಕೆ ಪಡೆಯುತ್ತೇವೆ,'' ಎಂದು ಅಧಿಕಾರಿ ಹೇಳಿದರು.
''ಕೊರೊನಾ ಕಾರಣದಿಂದಾಗಿ ಮಧ್ಯಾಹ್ನ 3 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇರುವುದರಿಂದ ತಪ್ಪಿಸಿಕೊಳ್ಳುವ ಕೈದಿಗಳಿಗೆ ಈ ಪರಿಸ್ಥಿತಿಯಲ್ಲಿ ಹೆಚ್ಚು ದೂರ ಹೋಗುವುದು ಕಷ್ಟ,'' ಎಂದು ಪಾಸಿಘಾಟ್ ಉಪ ಪೊಲೀಸ್ ವರಿಷ್ಠಾಧಿಕಾರಿ ತಪಾಂಗ್ ತಾಟಕ್ ಹೇಳಿದ್ದಾರೆ.
(ಒನ್‌ಇಂಡಿಯಾ ಸುದ್ದಿ)
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications