ಭಾರತದಲ್ಲಿ ಕಳೆದ 72 ದಿನದಲ್ಲೇ ಅತಿ ಕಡಿಮೆ ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಜೂನ್ 14: ಭಾರತದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 70,421 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಕಳೆದ 72 ದಿನಗಳಲ್ಲೇ ಅತಿ ಕಡಿಮೆ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಒಂದೇ ದಿನದಲ್ಲಿ 1,19,501 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 3921 ಮಂದಿ ಮೃತಪಟ್ಟಿದ್ದಾರೆ, ಒಟ್ಟು 2,95,10,410 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೆ 2,81,62,947 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

70,421 New Coronavirus Cases Reported In India In Last 24 Hours

ಇದುವರೆಗೆ 3,74,305 ಮಂದಿ ಮೃತಪಟ್ಟಿದ್ದಾರೆ, ಒಟ್ಟು 9,73,158 ಸಕ್ರಿಯ ಪ್ರಕರಣಗಳಿವೆ, ಇದುವರೆಗೆ 25,48,49,301 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇದುವರೆಗೆ 37,96,24,626 ಮಾದರಿಗಳನ್ನು ಪರೀಕ್ಷಿಸಲಾಗಿದೆ, ಭಾನುವಾರ ಒಂದೇ ದಿನ 14,92,152 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.

ಕಳೆದ 72 ದಿನಗಳಲ್ಲಿಯೇ ಸೋಂಕಿನ ಪ್ರಮಾಣ ಈ ಮಟ್ಟಕ್ಕೆ ಇಳಿದಿರುವುದು ಕೊರೋನಾ ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿದ್ದ ದೇಶಕ್ಕೆ ಕೊಂಚ ಸಮಾಧಾನವಾದಂತಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 3 ಸಾವಿರದ 921 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+