ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 69,06,152

ನವದೆಹಲಿ, ಅಕ್ಟೋಬರ್ 09 : ಭಾರತದಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 69,06,152ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 24 ಗಂಟೆಯಲ್ಲಿ 70,496 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ 24 ಗಂಟೆಯಲ್ಲಿ 964 ಜನರು ಮೃತಪಟ್ಟಿದ್ದಾರೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 1,06,490. ಸಕ್ರಿಯ ಪ್ರಕರಣಗಳ ಸಂಖ್ಯೆ 8,93,592, ಇದುವರೆಗೂ ಗುಣಮುಖರಾದವರು ಒಟ್ಟು 59,06,070.

ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 6.84 ಮಿಲಿಯನ್. ವಿಶ್ವದಲ್ಲಿಯೇ ಅತಿ ಹೆಚ್ಚು ಸೋಂಕಿತರು ಇರುವ ದೇಶದಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಅಮೆರಿಕ ಇದೆ.

 70,496 New COVID Cases Reported In India In 24 Hours

ದೇಶದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ರಾಜ್ಯದಲ್ಲಿ ಗುರುವಾರ 13,395 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 14,93,884ಕ್ಕೆ ಏರಿಕೆಯಾಗಿದೆ.

ಟಾಪ್ ರಾಜ್ಯಗಳು : ಭಾರತದಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ 2ನೇ ರಾಜ್ಯ ಆಂಧ್ರ ಪ್ರದೇಶ. ರಾಜ್ಯದಲ್ಲಿ ಗುರುವಾರ 5,292 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,39,719ಕ್ಕೆ ಏರಿಕೆಯಾಗಿದೆ.

ಕರ್ನಾಟಕ ರಾಜ್ಯ 3ನೇ ಸ್ಥಾನದಲ್ಲಿದೆ. 10,704 ಹೊಸ ಪ್ರಕರಣ ಗುರುವಾರ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 6,79,356ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಸತತ ಮೂರು ದಿನಗಳಿಂದ ಹೊಸ ಪ್ರಕರಣಗಳ ಸಂಖ್ಯೆ 5 ಸಾವಿರದ ಗಡಿ ದಾಟಿದೆ.

ತಮಿಳುನಾಡು ರಾಜ್ಯ 4ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 6,40,943ಕ್ಕೆ ಏರಿಕೆಯಾಗಿದೆ. ಗುರುವಾರ ರಾಜ್ಯದಲ್ಲಿ ದಾಖಲಾದ ಹೊಸ ಪ್ರಕರಣಗಳ ಸಂಖ್ಯೆ 5088.

ಕೇರಳದಲ್ಲಿ ಗುರುವಾರ 5,445 ಹೊಸ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶದಲ್ಲಿ 3,133. ಪಶ್ಚಿಮ ಬಂಗಾಳದಲ್ಲಿ 3,526. ಓಡಿಶಾದಲ್ಲಿ 3,144 ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+