ಭಾರತದಲ್ಲಿ ಒಂದೇ ದಿನ 70589 ಮಂದಿಗೆ ಕೊವಿಡ್-19 ಪಾಸಿಟಿವ್

ನವದೆಹಲಿ, ಸಪ್ಟೆಂಬರ್.29: ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 61 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 70589 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ.

ಕಳೆದ ಸೋಮವಾರ ಬೆಳಗ್ಗೆ 9 ಗಂಟೆಯಿಂದ ಬುಧವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 776 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 96318ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ. ಈ ಪೈಕಿ 51,01,398 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 9,47,576 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

70589 New Covid-19 Cases And 776 Deaths Reported In India In The Last 24 Hours

7,31,10,041 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 11,42,811 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,31,10,041 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಅಟ್ಟಹಾಸಕ್ಕೆ ಭಾರತವಷ್ಟೇ ಅಲ್ಲದೇ ವಿಶ್ವದ ಬಲಿಷ್ಠ ರಾಷ್ಟ್ರಗಳೇ ತತ್ತರಿಸಿ ಹೋಗಿವೆ. ಜಗತ್ತಿನಲ್ಲಿ ಇದುವರೆಗಿನ ಅಂಕಿ ಅಂಶಗಳ ಪ್ರಕಾರ ಮಹಾಮಾರಿಗೆ 10,06,377 ಜನರು ಪ್ರಾಣ ಬಿಟ್ಟಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,35,52,152ರಷ್ಟಿದ್ದು, 2,48,80,948 ಸೋಂಕಿತರು ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+