ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಒಂದೇ ದಿನ 70589 ಮಂದಿಗೆ ಕೊವಿಡ್-19 ಪಾಸಿಟಿವ್

|
Google Oneindia Kannada News

ನವದೆಹಲಿ, ಸಪ್ಟೆಂಬರ್.29: ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 61 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 70589 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ.

ಕಳೆದ ಸೋಮವಾರ ಬೆಳಗ್ಗೆ 9 ಗಂಟೆಯಿಂದ ಬುಧವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 776 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 96318ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ. 100ರಷ್ಟು ಹೆಚ್ಚಳ: ಕೇಂದ್ರ ಆರೋಗ್ಯ ಸಚಿವಾಲಯಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ. 100ರಷ್ಟು ಹೆಚ್ಚಳ: ಕೇಂದ್ರ ಆರೋಗ್ಯ ಸಚಿವಾಲಯ

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ. ಈ ಪೈಕಿ 51,01,398 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 9,47,576 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

70589 New Covid-19 Cases And 776 Deaths Reported In India In The Last 24 Hours

7,31,10,041 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 11,42,811 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,31,10,041 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಮತ್ತೆ ಲಾಕ್ ಡೌನ್, ಸಚಿವರ ಸ್ಪಷ್ಟೀಕರಣ: ಏನಿದು ಮೈಕ್ರೋ ಕಂಟೇನ್ಮೆಂಟ್ ಸೀಲ್ಡೌನ್? ಮತ್ತೆ ಲಾಕ್ ಡೌನ್, ಸಚಿವರ ಸ್ಪಷ್ಟೀಕರಣ: ಏನಿದು ಮೈಕ್ರೋ ಕಂಟೇನ್ಮೆಂಟ್ ಸೀಲ್ಡೌನ್?

ಕೊರೊನಾವೈರಸ್ ಅಟ್ಟಹಾಸಕ್ಕೆ ಭಾರತವಷ್ಟೇ ಅಲ್ಲದೇ ವಿಶ್ವದ ಬಲಿಷ್ಠ ರಾಷ್ಟ್ರಗಳೇ ತತ್ತರಿಸಿ ಹೋಗಿವೆ. ಜಗತ್ತಿನಲ್ಲಿ ಇದುವರೆಗಿನ ಅಂಕಿ ಅಂಶಗಳ ಪ್ರಕಾರ ಮಹಾಮಾರಿಗೆ 10,06,377 ಜನರು ಪ್ರಾಣ ಬಿಟ್ಟಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,35,52,152ರಷ್ಟಿದ್ದು, 2,48,80,948 ಸೋಂಕಿತರು ಗುಣಮುಖರಾಗಿದ್ದಾರೆ.

English summary
70589 New Covid-19 Cases And 776 Deaths Reported In India In The Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X