ಭಾರತದಲ್ಲಿ ಈವರೆಗೂ 72,97,50,724 ಡೋಸ್ ಲಸಿಕೆ ವಿತರಣೆ

ನವದೆಹಲಿ, ಸಪ್ಟೆಂಬರ್ 10: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯು ಸಮರೋಪಾದಿಯಲ್ಲಿ ನಡೆಯುತ್ತಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 56 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 238 ದಿನಗಳಾಗಿದ್ದು, ಶುಕ್ರವಾರ ರಾತ್ರಿ 7 ಗಂಟೆ ವೇಳೆಗೆ 56,91,552 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈ ಪೈಕಿ 38,36,154 ಮಂದಿಗೆ ಮೊದಲ ಡೋಸ್ ಹಾಗೂ 18,55,398 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಭಾರತದಲ್ಲಿ ಈವರೆಗೂ 72,97,50,724 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 71,94,73,325 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

72.97 Crore Beneficiaries Got Vaccinated Against Coronavirus Across India

ನಾಲ್ಕು ಹಂತದಲ್ಲಿ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಯಾವ ಹಂತದವರಿಗೆ ಎಷ್ಟು ಲಸಿಕೆ ವಿತರಣೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,62,062 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 85,35,698 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,33,801 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,37,89,162 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 54,58,47,706 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 16,94,06,447 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 28,57,04,140 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 3,85,99,523 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 14,01,00,086 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,04,08,072 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣದ ಬಗ್ಗೆ ತಿಳಿಯಿರಿ

2021ರ ಸೆಪ್ಟೆಂಬರ್ 10ರ ಅಂಕಿ-ಅಂಶಗಳ ಪ್ರಕಾರ, 71,94,73,325 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 71,94,73,325

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 7,00,000

* ಕೊವಿಡ್-19 ಲಸಿಕೆಯ ಲಭ್ಯತೆ - 5,72,74,025

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+