ಭಾರತ; 24 ಗಂಟೆಯಲ್ಲಿ 72,049 ಹೊಸ ಕೋವಿಡ್ ಪ್ರಕರಣ ದಾಖಲು
ನವೆಹಲಿ, ಅಕ್ಟೋಬರ್ 07: ಭಾರತದಲ್ಲಿ 24 ಗಂಟೆಯಲ್ಲಿ 72,049 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಂತೆ 24 ಗಂಟೆಯಲ್ಲಿ 986 ಜನರು ಭಾರತದಲ್ಲಿ ಮೃತಪಟ್ಟಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,04,555.
ದೇಶದಲ್ಲಿ ಇದುವರೆಗೂ ಗುಣಮುಖರಾದವರು 57,44,694. ಸಕ್ರಿಯ ಪ್ರಕರಣಗಳ ಸಂಖ್ಯೆ 9,07,883. ವಿಶ್ವದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ ದೇಶದಲ್ಲಿ ಭಾರತ 2ನೇ ಸ್ಥಾನದಲ್ಲಿದೆ.

ಅಕ್ಟೋಬರ್ 6ರ ತನಕ ಭಾರತದಲ್ಲಿ 11,99,857 ಮಾದರಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದೆ. 8,22,71,654 ಮಾದರಿಗಳ ಪರೀಕ್ಷೆಗಳನ್ನು ಅಕ್ಟೋಬರ್ 6ರಂದು ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಕಳೆದ 24 ಗಂಟೆಯಲ್ಲಿ 5 ರಾಜ್ಯಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರ ರಾಜ್ಯವೊಂದರಲ್ಲಿಯೇ 12,258 ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ.
ಭಾರತದಲ್ಲಿ ಕೋವಿಡ್ ಸೋಂಕಿತರ ಗುಣಮುಖ ಪ್ರಮಾಣ ಶೇ 85ರಷ್ಟಿದೆ. ಮರಣ ಪ್ರಮಾಣ ಶೇ 1.5, ಪಾಸಿಟಿವಿಟಿ ದರ ಶೇ 5.6ರಷ್ಟಿದೆ.
ಹೆಚ್ಚು ಸೋಂಕಿತರು : ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,65,911. ಆಂಧ ಪ್ರದೇಶ 7,29,307. ಕರ್ನಾಟಕ 3ನೇ ಸ್ಥಾನದಲ್ಲಿದ್ದು ಒಟ್ಟು ಸೋಂಕಿತರು 6,57,705.












Click it and Unblock the Notifications