ಕೊರೊನಾ ಸ್ಪೋಟ: ಈ ವರ್ಷದ ಅತಿ ಹೆಚ್ಚು ದೈನಂದಿನ ಕೊರೊನಾ ಪ್ರಕರಣಗಳು ಪತ್ತೆ

ನವದೆಹಲಿ, ಏಪ್ರಿಲ್ 1: ಭಾರತದಲ್ಲಿ ಕೊರೊನಾ ವೈರಸ್ 2ನೇ ಅಲೆ ತೀವ್ರಗತಿಯಲ್ಲಿಹರಡುತ್ತಿದ್ದು, ಕೊರೊನಾ ವೈರಸ್ ಸೋಂಕಿನ ವೇಗಕ್ಕೆ ಕಡಿವಾಣ ಇಲ್ಲದಂತಾಗಿದೆ. 2021ರಲ್ಲಿಯೇ ಅತಿ ಹೆಚ್ಚು ದೈನಂದಿನ ಕೊರೊನಾ ಪ್ರಕರಣಗಳು ಗುರುವಾರ ಪತ್ತೆಯಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 72,330 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ಹತ್ತು ದಿನಗಳಲ್ಲಿ 4 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ.

ಬುಧವಾರದ ಕೊರೊನಾ ಸೋಂಕಿತರಲ್ಲಿ 40,382 ಜನರು ಚೇತರಿಸಿಕೊಂಡಿದ್ದರೆ, 459 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ಹೇಳಿದೆ. ದೈನಂದಿನ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯೂ ದುಪ್ಪಟ್ಟಾಗಿದೆ.

72,330 New Coronavirus Cases Reported In India In The Last 24 Hours

ಈ ಮೂಲಕ ಭಾರತ ದೇಶದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 1,22,21,665ಕ್ಕೆ ಏರಿದ್ದರೆ, 1,14,74,683 ಪ್ರಕರಣಗಳು ಚೇತರಿಕೆ ಕಂಡಿವೆ.

Recommended Video

      ಇವರ ಕೆಟ್ಟ ಆಡಳಿತದ ವಿರುದ್ಧ ನಾವು ಹೋರಾಟ ಮಾಡ್ತೀವಿ ! | DK Shivakumar | Oneindia Kannada

      ಈವರೆಗೆ ಭಾರತದಲ್ಲಿ 1,62,927 ಸೋಂಕಿತರು ಸಾವನ್ನಪ್ಪಿದ್ದು, ಇನ್ನೂ 5,84,055 ಸಕ್ರಿಯ ಕೊರೊನಾ ಪ್ರಕರಣಗಳಿವೆ. ದೇಶದಲ್ಲಿ ಮಾ.31 ರವರೆಗೆ 6,51,17,896 ಕೋಟಿ ಜನರಿಗೆ ಕೊರೊನಾ ಲಸಿಕೆ ಪ್ರಮಾಣವನ್ನು ನೀಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+