ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದ ವ್ಯಾಕ್ಸಿನೇಷನ್ ಕೇಂದ್ರಗಳ ಸಂಖ್ಯೆ

|
Google Oneindia Kannada News

ನವದೆಹಲಿ, ಏಪ್ರಿಲ್ 20: ಒಂದೇ ದಿನ 73,600 ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳು ಕಾರ್ಯನಿರ್ವಹಿಸುವ ಮೂಲಕ ಭಾರತದಲ್ಲಿ ವ್ಯಾಕ್ಸಿನೇಷನ್ ಕೇಂದ್ರಗಳ ಸಂಖ್ಯೆ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಸೋಮವಾರ ಒಂದೇ ದಿನದಲ್ಲಿ 73,600 ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರ ತೆರೆದಿದ್ದು, ಇದು ಒಂದು ದಿನದ ದೇಶಾದ್ಯಂತ ಸರಾಸರಿ 45,000 ಸಕ್ರಿಯ ಕೇಂದ್ರಗಳಿಗಿಂತ 28,600 ಹೆಚ್ಚಾಗಿದೆ.

ದೆಹಲಿಯಲ್ಲಿ ಪ್ರತಿ ಗಂಟೆಗೆ 10 ಜನರು ಕೋವಿಡ್-19ಗೆ ಬಲಿ!ದೆಹಲಿಯಲ್ಲಿ ಪ್ರತಿ ಗಂಟೆಗೆ 10 ಜನರು ಕೋವಿಡ್-19ಗೆ ಬಲಿ!

ಭಾರತದಲ್ಲಿ ಸೋಮವಾರ ರಾತ್ರಿ 8 ಗಂಟೆಯವರೆಗೆ 31 ಲಕ್ಷಕ್ಕೂ ಹೆಚ್ಚು ಕೊರೊನಾ ಲಸಿಕೆ ಡೋಸ್ ಗಳನ್ನು ನೀಡಲಾಗಿದ್ದು, ಸುಮಾರು 21.7 ಲಕ್ಷ ಜನರು ಮೊದಲ ಡೋಸ್ ಪಡೆದಿದ್ದರೆ, 9.3 ಲಕ್ಷ ಜನರಿಗೆ ಎರಡನೇ ಡೋಸ್ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ತಾತ್ಕಾಲಿಕ ವರದಿಯಲ್ಲಿ ತಿಳಿಸಲಾಗಿದೆ.

73,600 Covid Vaccination Centres Operational In India On Monday

ಕೆಲಸದ ಸ್ಥಳಗಳಲ್ಲಿ ಕೊರೊನಾ ಲಸಿಕೆ ನೀಡಲಾಗಿದ್ದು, ಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಲು ಸಹಕಾರಿಯಾಗಿದೆ. ಜನವರಿ 16 ರಂದು ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾದಾಗಿನಿಂದ ದೇಶದಲ್ಲಿ ನೀಡಲಾದ ಲಸಿಕೆ ಪ್ರಮಾಣಗಳ ಒಟ್ಟು ಸಂಖ್ಯೆ ಈಗ 12.69 ಕೋಟಿಗಿಂತ ಹೆಚ್ಚಾಗಿದೆ.

ದೇಶಾದ್ಯಂತದ ಎಲ್ಲ ಅಖಿಲ ಭಾರತ ವೈದ್ಯಕೀಯ ವಿಜ್ಞಾನ (ಏಮ್ಸ್) ಆಸ್ಪತ್ರೆಗಳಿಗೆ ಹೆಚ್ಚುವರಿಯಾಗಿ, ಆಮ್ಲಜನಕ ಬೆಂಬಲಿತ ಹಾಸಿಗೆಗಳು ಮತ್ತು ತೀವ್ರ ನಿಗಾ ಘಟಕ (ಐಸಿಯು)-ವೆಂಟಿಲೇಟರ್ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ನಿರ್ದೇಶಿಸಿದೆ.

English summary
The number of vaccination centers in India has reached a peak with 73,600 Covid Vaccination Centers operation On Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X