ಭಾರತ; ಕೋವಿಡ್ ಸೋಂಕಿತರ ಸಂಖ್ಯೆ 70,53,807
ನವದೆಹಲಿ, ಅಕ್ಟೋಬರ್ 11: ಭಾರತದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 70,53,807ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 74,383 ಹೊಸ ಪ್ರಕರಣಗಳು ದಾಖಲಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಯಲ್ಲಿ 918 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ. ಇದುವರೆಗೂ ಮೃತಪಟ್ಟವರ ಒಟ್ಟು ಸಂಖ್ಯೆ 1,08,334.
ದೇಶದಲ್ಲಿನ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 8,67,496. ಇದುವರೆಗೂ ದೇಶದಲ್ಲಿ ಗುಣಮುಖಗೊಂಡವರ ಒಟ್ಟು ಸೋಂಖ್ಯೆ 60,77,977.

ಭಾರತದಲ್ಲಿ ಅಕ್ಟೋಬರ್ 10ರ ತನಕ 8,68,77,242 ಮಾದರಿಗಳ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ. ಅಕ್ಟೋಬರ್ 10ರಂದು 10,78,544 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ವಿಶ್ವದಲ್ಲಿ 7.75 ಮಿಲಿಯನ್ ಸೋಂಕಿತರು ಅಮೆರಿಕದಲ್ಲಿದ್ದಾರೆ. ಭಾರತದಲ್ಲಿ 7.05 ಮಿಲಿಯನ್ ಸೋಂಕಿತರು ಇದ್ದು, ದೇಶ ವಿಶ್ವದಲ್ಲಿಯೇ 2ನೇ ಸ್ಥಾನದಲ್ಲಿದೆ. 5.08 ಮಿಲಿಯನ್ ಸೋಂಕಿತರು ಇರುವ ಬ್ರೆಜಿಲ್ 3ನೇ ಸ್ಥಾನದಲ್ಲಿದೆ.
ದೇಶದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ ರಾಜ್ಯ ಮಹಾರಾಷ್ಟ್ರ. ಶನಿವಾರ ರಾಜ್ಯದಲ್ಲಿ 11,416 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 15,17,434ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 2,21,156.
ಆಂಧ್ರ ಪ್ರದೇಶದಲ್ಲಿ ಶನಿವಾರ 5,653 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯ ದೇಶದಲ್ಲಿಯೇ 2ನೇ ಸ್ಥಾನದಲ್ಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,50,517ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 10 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಶನಿವಾರ ರಾಜ್ಯದಲ್ಲಿ 10,517 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 700786ಕ್ಕೆ ಏರಿಯಾಗಿದೆ.
ತಮಿಳುನಾಡು ರಾಜ್ಯದಲ್ಲಿ ಶನಿವಾರ 5,242 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 6,51,370ಕ್ಕೆ ಏರಿಕೆಯಾಗಿದೆ.
ಶನಿವಾರ ಉತ್ತರ ಪ್ರದೇಶದಲ್ಲಿ 3046, ದೆಹಲಿಯಲ್ಲಿ 2,866, ಪಶ್ಚಿಮ ಬಂಗಾಳದಲ್ಲಿ 3,591, ಕೇರಳದಲ್ಲಿ 11,755 ಹೊಸ ಪ್ರಕರಣಗಳು ದಾಖಲಾಗಿವೆ.












Click it and Unblock the Notifications