ಭಾರತದಲ್ಲಿ ಒಂದೇ ದಿನ 67 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಸಪ್ಟೆಂಬರ್ 14: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯು ಸಮರೋಪಾದಿಯಲ್ಲಿ ನಡೆಯುತ್ತಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 67 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 241 ದಿನಗಳಾಗಿದ್ದು, ಸೋಮವಾರ ರಾತ್ರಿ 7 ಗಂಟೆ ವೇಳೆಗೆ 67,04,768 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 72,70,48,325 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.
ಭಾರತದಲ್ಲಿ ಈವರೆಗೂ 75,10,41,391 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 56,95,77,696 ಮಂದಿಗೆ ಮೊದಲ ಡೋಸ್ ಹಾಗೂ 18,14,63,695 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?:
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,64,684 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 86,11,479 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,38,713 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,41,01,351 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
18 ವರ್ಷ ಮೇಲ್ಪಟ್ಟ 30,26,12,416 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 4,52,87,346 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 14,45,93,468 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,37,26,534 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 56,95,77,696 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 18,14,63,695 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ನಾಲ್ಕು ಹಂತದಲ್ಲಿ ಕೊರೊನಾವೈರಸ್ ಲಸಿಕೆ
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.
ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?:
2021ರ ಸೆಪ್ಟೆಂಬರ್ 13ರ ಅಂಕಿ-ಅಂಶಗಳ ಪ್ರಕಾರ, 72,70,48,325 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 72,70,48,325
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 8,25,000
* ಕೊವಿಡ್-19 ಲಸಿಕೆಯ ಲಭ್ಯತೆ - 4,90,36,525












Click it and Unblock the Notifications