ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊವಿಡ್-19 ಪ್ರಕರಣ

ನವದೆಹಲಿ, ಸಪ್ಟೆಂಬರ್.22: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 55 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 75083 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ.

ಕಳೆದ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಂಗಳವಾರ ಬೆಳಗ್ಗೆ 10 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 1053 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 88935ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 55, 62,664ಕ್ಕೆ ಏರಿಕೆಯಾಗಿದೆ. ಈ ಪೈಕಿ 44,97,868 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 975861 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 75083 New Covid-19 Cases And 1053 Deaths Reported In India In The Last 24 Hours

6,43,92,594 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 9,33,185 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 6,53,25,779 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದಲ್ಲಿ 3,14,82,604 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ ಜಗತ್ತಿನಲ್ಲಿ 9,69,298 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 2,31,10,086 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.

Recommended Video

      Chahal ಎಸೆತಕ್ಕೆ Sun Risers ತತ್ತರ!! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+