ಭಾರತದಲ್ಲಿ 24 ಗಂಟೆಯಲ್ಲಿ 75,809 ಹೊಸ ಪ್ರಕರಣ ದಾಖಲು

ನವದೆಹಲಿ, ಸೆಪ್ಟೆಂಬರ್ 08: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 75,809 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

Recommended Video

      Jagan Mohan Reddy ನಿರ್ಧಾರದಿಂದ ಬೌದ್ಧ ದೇಗುಲ ನಿರ್ಣಾಮ | Oneindia Kannada

      24 ಗಂಟೆಯಲ್ಲಿ 1,133 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ. ಇದುವರೆಗೂ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ 72,775ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,83,697.

      75,809 New COVID Cases In India In Last 24 hours

      ಭಾರತದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 33,23,951 ಜನರು ಇದುವರೆಗೂ ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ.

      ಮಹಾರಾಷ್ಟ್ರ, ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಉತ್ತರ ಪ್ರದೇಶ ದೇಶದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯಗಳು. ಅತಿ ಹೆಚ್ಚು ಸೋಂಕಿತರು ಇರುವ ಮಹಾರಾಷ್ಟ್ರದಲ್ಲಿ ಸೋಮವಾರ 16,429 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 9,23,641.

      ಆಂಧ್ರ ಪ್ರದೇಶದಲ್ಲಿ 5,06,493, ತಮಿಳುನಾಡಿನಲ್ಲಿ 4,69,256, ಕರ್ನಾಟಕದಲ್ಲಿ 4,04,324 ಮತ್ತು ಉತ್ತರ ಪ್ರದೇಶದಲ್ಲಿ 2,71,851 ಸೋಂಕಿತರು ಇದ್ದಾರೆ. ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ 2077 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 1,93,526.

      ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರತ ವಿಶ್ವದಲ್ಲಿ 2ನೇ ಸ್ಥಾನದಲ್ಲಿದೆ. ಅಮೆರಿಕದಲ್ಲಿ 6,485,575 ಸೋಂಕಿತರು ಇದ್ದಾರೆ. ಭಾರತದಲ್ಲಿ 4,280,423. ಬ್ರೆಜಿಲ್‌ನಲ್ಲಿ 4,147,794 ಸೋಂಕಿತರು ಇದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+