• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಲಸಿಕೆ ಲೆಕ್ಕಾಚಾರ: ಭಾರತದಲ್ಲಿ 76.49 ಕೋಟಿ ಮಂದಿಗೆ ಕೊವಿಡ್-19 ಲಸಿಕೆ!

|
Google Oneindia Kannada News

ನವದೆಹಲಿ, ಸಪ್ಟೆಂಬರ್ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಲಸಿಕೆಯೇ ಮೂಲಮಂತ್ರ ಎಂದು ಸೂಕ್ಷ್ಮಾಣುಶಾಸ್ತ್ರಜ್ಞರು ಹೇಳಿದ್ದಾರೆ. ಕಳೆದ 9 ರಿಂದ 10 ಗಂಟೆಗಳಲ್ಲಿ 57 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 243 ದಿನಗಳಾಗಿದ್ದು, ಬುಧವಾರ ರಾತ್ರಿ 7 ಗಂಟೆ ವೇಳೆಗೆ 57,10,380 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 74,25,94,875 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

ಭಾರತದಲ್ಲಿ 6 ತಿಂಗಳಿನಲ್ಲೇ ಮಾಯವಾಗುತ್ತಾ ಕೊರೊನಾವೈರಸ್!?ಭಾರತದಲ್ಲಿ 6 ತಿಂಗಳಿನಲ್ಲೇ ಮಾಯವಾಗುತ್ತಾ ಕೊರೊನಾವೈರಸ್!?

ಭಾರತದಲ್ಲಿ ಈವರೆಗೂ 76,49,36,158 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 57,80,94,804 ಮಂದಿಗೆ ಮೊದಲ ಡೋಸ್ ಹಾಗೂ 18,68,41,354 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?:

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,65,571 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 86,39,913 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,40,244 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,41,99,628 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 30,87,70,934 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 4,87,22,784 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 14,61,56,251 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,49,46,700 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 57,80,94,804 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 18,68,41,354 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಪೂರೈಕೆ ಎಷ್ಟಿದೆ?

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಪೂರೈಕೆ ಎಷ್ಟಿದೆ?

2021ರ ಸೆಪ್ಟೆಂಬರ್ 15ರ ಅಂಕಿ-ಅಂಶಗಳ ಪ್ರಕಾರ, 74,25,94,875 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 74,25,94,875

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,80,83,000

* ಕೊವಿಡ್-19 ಲಸಿಕೆಯ ಲಭ್ಯತೆ - 4,62,75,955

ಕಳೆದೊಂದು ದಿನದಲ್ಲಿ 27,176 ಮಂದಿಗೆ ಕೊವಿಡ್-19

ಕಳೆದೊಂದು ದಿನದಲ್ಲಿ 27,176 ಮಂದಿಗೆ ಕೊವಿಡ್-19

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 27,176 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 38,012 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 284 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,33,16,755ಕ್ಕೆ ಏರಿಕೆಯಾಗಿದೆ. ಇದುವರೆಗೂ 3,25,22,171 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 4,43,497 ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ದೇಶದಲ್ಲಿ 3,51,087 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

English summary
In 243 Days 76.49 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X