ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 24 ಗಂಟೆಗಳಲ್ಲೇ 77266 ಜನರಿಗೆ ಕೊರೊನಾವೈರಸ್!

|
Google Oneindia Kannada News

ನವದೆಹಲಿ, ಆಗಸ್ಟ್.28: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪ್ರತಿನಿತ್ಯ ಹೊಸ ದಾಖಲೆ ಬರೆಯುತ್ತಿವೆ. ಗುರುವಾರ 75760 ಜನರಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿದ್ದು, ದಾಖಲಾಗಿತ್ತು. ಕಳದೆ 24 ಗಂಟೆಗಳಲ್ಲೇ 77266 ಜನರಿಗೆ ಕೊವಿಡ್-19 ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಒಂದೇ ದಿನ 1057 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 61529ಕ್ಕೆ ಏರಿಕೆಯಾಗಿದೆ. ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 3387501ಕ್ಕೆ ಏರಿಕೆಯಾಗಿದೆ.

ಕೊವಿಡ್-19ನಿಂದ ಪ್ರಾಣ ಬಿಟ್ಟ 100ರಲ್ಲಿ 89 ಜನ ಈ ರಾಜ್ಯದವರು!ಕೊವಿಡ್-19ನಿಂದ ಪ್ರಾಣ ಬಿಟ್ಟ 100ರಲ್ಲಿ 89 ಜನ ಈ ರಾಜ್ಯದವರು!

ಭಾರತದಲ್ಲಿ ಒಟ್ಟು 3387501 ಕೊರೊನಾವೈರಸ್ ಸೋಂಕಿತ ಪ್ರಕರಣ ಪೈಕಿ 25,83,948 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,42,023 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 77266 New Covid-19 Cases And 1057 Deaths Reported In India In Last 24 Hours

ಒಂದೇ ದಿನ 9,24,998 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 3,94,77,848 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. 24 ಗಂಟೆಗಳಲ್ಲಿ ದೇಶಾದ್ಯಂತ 9,01,338 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ತಪಾಸಣೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ವಿಶ್ವದಲ್ಲಿ 2,46,28,190 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಜಗತ್ತಿನಲ್ಲಿ 8,35,628 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,70,94,258 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.

English summary
77266 New Covid-19 Cases And 1057 Deaths Reported In India In Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X