ಭಾರತದಲ್ಲಿ ಒಂದೇ ದಿನ 78357 ಜನರಿಗೆ ಕೊರೊನಾವೈರಸ್!

ನವದೆಹಲಿ, ಸಪ್ಟೆಂಬರ್.02: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 37 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 78357 ಜನರಿಗೆ ಮಹಾಮಾರಿ ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

Recommended Video

      Indian Generic ‌ಔಷಧ ತಯಾರಕರಿಗೆ ಲಾಭ | Oneindia Kannada

      ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಬುಧವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿನಿಂದಾಗಿ 1045 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಇದುವರೆಗೂ ಬಲಿಯಾದವರ ಸಂಖ್ಯೆ 66333ಕ್ಕೆ ಏರಿಕೆಯಾಗಿದೆ.

      ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 3769524ಕ್ಕೆ ಏರಿಕೆಯಾಗಿದೆ. ಈ ಪೈಕಿ 2901909 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಬಾಕಿ 801282 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

      78357 New Covid-19 Cases And 1045 Deaths Reported In India In The Last 24 Hours


      1012367 ಜನರಿಗೆ ಕೊರೊನಾವೈರಸ್ ಪರೀಕ್ಷೆ:

      ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 1012367 ಜನರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಇದುವರೆಗೂ 4.43,37,201 ಜನರ ರಕ್ತ ಮತ್ತು ಗಂಟಲು ಮಾದರಿಯನ್ನು ಕೊವಿಡ್-19 ಸೋಂಕು ತಪಾಸಣೆಗಾಗಿ ಸಂಗ್ರಹಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ತಿಳಿಸಿದೆ.

      ವಿಶ್ವದಲ್ಲಿ 2,59,04,164 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ ಜಗತ್ತಿನಲ್ಲಿ 8,61,251 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,81,96,019 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+