ಭಾರತದಲ್ಲಿ 24 ಗಂಟೆಗಳಲ್ಲೇ 78512 ಮಂದಿಗೆ ಕೊರೊನಾವೈರಸ್ ಸೋಂಕು!

ನವದೆಹಲಿ, ಆಗಸ್ಟ್.31: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 36 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 78512 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

Recommended Video

      CSK ಬದಲಿಗೆ ಮೊದಲ ಮ್ಯಾಚ್ ಆಗಲಿದೆಯೇ RCB | Oneindia Kannada

      ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸೋಮವಾರ ಬೆಳಗ್ಗೆ 10 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 971 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 64469ಕ್ಕೆ ಏರಿಕೆಯಾಗಿದೆ.

      ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 3621246ಕ್ಕೆ ಏರಿಕೆಯಾಗಿದೆ. ಈ ಪೈಕಿ 2774802 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,81,975 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

      78512 New Covid-19 Cases And 971 Deaths Reported In India In The Last 24 Hours


      846278 ಜನರಿಗೆ ಕೊರೊನಾವೈರಸ್ ಪರೀಕ್ಷೆ:

      ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 846278 ಜನರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಇದುವರೆಗೂ 4.23,07,914 ಜನರ ರಕ್ತ ಮತ್ತು ಗಂಟಲು ಮಾದರಿಯನ್ನು ಕೊವಿಡ್-19 ಸೋಂಕು ತಪಾಸಣೆಗಾಗಿ ಸಂಗ್ರಹಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ತಿಳಿಸಿದೆ.

      ವಿಶ್ವದಲ್ಲಿ 2,53,87,142 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ ಜಗತ್ತಿನಲ್ಲಿ 8,50,598 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,77,08,854 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+