ಭಾರತ; 24 ಗಂಟೆಯಲ್ಲಿ 78,524 ಹೊಸ ಕೋವಿಡ್ ಪ್ರಕರಣ

ನವದೆಹಲಿ, ಅಕ್ಟೋಬರ್ 08: ಭಾರತದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 68,35,656ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ದೇಶದಲ್ಲಿ 78,524 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಯಲ್ಲಿ 971 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 1,05,526.

ಭಾರತದಲ್ಲಿನ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 9,02,425. ಇದುವರೆಗೂ 58,27,705 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 6.76 ಲಕ್ಷ ಸೋಂಕಿತರು ಇದ್ದು, ವಿಶ್ವದಲ್ಲಿ ಹೆಚ್ಚು ಸೋಂಕಿತರು ಇರುವ ದೇಶಗಳಲ್ಲಿ ಭಾರತ 2ನೇ ಸ್ಥಾನದಲ್ಲಿದೆ.

78,524 New COVID Cases In India In 24 Hours

ಭಾರತದಲ್ಲಿ ಅಕ್ಟೋಬರ್ 7ರ ತನಕ 8,34,65,975 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. ಅಕ್ಟೋಬರ್ 7ರಂದು 11,94,321 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ಎಲ್ಲಿ ಎಷ್ಟು ಕೇಸ್ : ಬುಧವಾರ ಮಹಾರಾಷ್ಟ್ರದಲ್ಲಿ 14,578, ಆಂಧ್ರ ಪ್ರದೇಶದಲ್ಲಿ 5,120, ಕರ್ನಾಟಕದಲ್ಲಿ 10,947, ತಮಿಳುನಾಡಿನಲ್ಲಿ 5,447, ಉತ್ತರ ಪ್ರದೇಶದಲ್ಲಿ3,389 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕೇರಳದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿತ್ತು. ಬುಧವಾರ ರಾಜ್ಯದಲ್ಲಿ 10,606 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 2,53,406ಕ್ಕೆ ಏರಿಕೆಯಾಗಿದೆ.

ಪಶ್ಚಿಮ ಬಂಗಾಳದಲ್ಲಿ 3,455, ಓಡಿಶಾದಲ್ಲಿ 2,995, ಬಿಹಾರದಲ್ಲಿ 1,304, ರಾಜಸ್ಥಾನದಲ್ಲಿ 2,151, ದೆಹಲಿಯಲ್ಲಿ 2,871 ಹೊಸ ಕೋವಿಡ್ ಪ್ರಕರಣಗಳು ಬುಧವಾರ ದಾಖಲಾಗಿವೆ.

ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,68,652ಕ್ಕೆ ಏರಿಕೆಯಾಗಿದೆ. ಈ ವಾರದಲ್ಲಿ 2 ದಿನ ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಬೆಂಗಳೂರು ನಗರದಲ್ಲಿ ಸತತ ಎರಡು ದಿನಗಳಿಂದ 5 ಸಾವಿರ ಹೊಸ ಪ್ರಕರಣ ದಾಖಲಾಗುತ್ತಿದೆ.

ಟಾಪ್ 5 ರಾಜ್ಯಗಳು : ಭಾರತದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ ರಾಜ್ಯ ಮಹಾರಾಷ್ಟ್ರ. ಒಟ್ಟು ಸೋಂಕಿತರು 14,80,489, ಸಕ್ರಿಯ ಪ್ರಕರಣಗಳ ಸಂಖ್ಯೆ 2,44,527.

ಆಂಧ್ರ ಪ್ರದೇಶ ರಾಜ್ಯ ಎರಡನೇ ಸ್ಥಾನದಲ್ಲಿದೆ. ಒಟ್ಟು ಸೋಂಕಿತರು 7,34,427, ಸಕ್ರಿಯ ಪ್ರಕರಣಗಳು 49,513. ಕರ್ನಾಟಕ 3ನೇ ಸ್ಥಾನದಲ್ಲಿದೆ (6,68,652).

ತಮಿಳುನಾಡು ರಾಜ್ಯ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 4ನೇ ಸ್ಥಾನದಲ್ಲಿದೆ, ರಾಜ್ಯದಲ್ಲಿ ಒಟ್ಟು ಸೋಂಕಿತರು 6,35,855. 5ನೇ ಸ್ಥಾನದಲ್ಲಿ ಉತ್ತರ ಪ್ರದೇಶ ರಾಜ್ಯವಿದೆ (4,24,326).

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+