24 ಗಂಟೆಯಲ್ಲಿ ಭಾರತದಲ್ಲಿ 78,761 ಹೊಸ ಕೋವಿಡ್ ಪ್ರಕರಣ

ನವದೆಹಲಿ, ಆಗಸ್ಟ್ 30: ಭಾರತದಲ್ಲಿ 24 ಗಂಟೆಯಲ್ಲಿ 78,761 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 35,42,734ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ. ಶನಿವಾರ ಬೆಳಗ್ಗೆ 8 ಗಂಟೆಯಿಂದ ಭಾನುವಾರ ಬೆಳಗ್ಗೆ 8 ಗಂಟೆಯ ತನಕ ದೇಶದಲ್ಲಿ 78,761 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 948 ಜನರು ಮೃತಪಟ್ಟಿದ್ದಾರೆ.

78,761 New COVID Cases In India On August 29

ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 27,13,934. ಇದುವರೆಗೂ ಮೃತಪಟ್ಟವರ ಸಂಖ್ಯೆ 63,498ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಇದೇ ಮೊದಲ ಬಾರಿಗೆ ಭಾರತದಲ್ಲಿ ಒಂದು ದಿನದಲ್ಲಿ 78,761 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 35,42,734ಕ್ಕೆ ಏರಿಕೆಯಾಗಿದೆ. ಈ ಮೂಲಕ ಭಾರತ ಸೋಂಕಿತರ ಸಂಖ್ಯೆಯಲ್ಲಿ 3ನೇ ಸ್ಥಾನಕ್ಕೆ ತಲುಪಿದೆ.

ಅಮೆರಿಕದಲ್ಲಿ 6,139,078, ಬ್ರೆಜಿಲ್‌ನಲ್ಲಿ 3,846,965, ಭಾರತದಲ್ಲಿ 3,542,733 ಸೋಂಕಿತರು ಇದ್ದಾರೆ. ರಷ್ಯಾ 4ನೇ ಸ್ಥಾನದಲ್ಲಿದ್ದು ಒಟ್ಟು ಸೋಂಕಿತರ ಸಂಖ್ಯೆ 985,346 ಆಗಿದೆ.

ಟಾಪ್ 5 ರಾಜ್ಯಗಳು : ಭಾರತದಲ್ಲಿ ಮಹಾರಾಷ್ಟ್ರದಲ್ಲಿ 7,64,281 ಸೋಂಕಿತರು ಇದ್ದು ರಾಜ್ಯ ಮೊದಲ ಸ್ಥಾನದಲ್ಲಿದೆ. ತಮಿಳುನಾಡಿನಲ್ಲಿ 4,15,590, ಆಂಧ್ರ ಪ್ರದೇಶದಲ್ಲಿ 4,14,164, ಕರ್ನಾಟಕದಲ್ಲಿ 3,27,076 ಮತ್ತು ಉತ್ತರ ಪ್ರದೇಶದಲ್ಲಿ 2,19,457 ಸೋಂಕಿತರು ಇದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+