ಸರ್ಕಾರಿ ನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ ನೀಡಿದ ಮೋದಿ ಸರ್ಕಾರ
ನವದೆಹಲಿ, ಅಕ್ಟೋಬರ್ 04: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳ ಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳ ನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ.
ಆದರೆ, ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆ ಬೇಡಿಕೆ ಇದ್ದೇ ಇದೆ.
ಸಂಬಳ ಏರಿಕೆ: ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಇಲಾಖೆಯ ವ್ಯಾಪ್ತಿಯ ಎಲ್ಲಾ ಸಿಬ್ಬಂದಿಗಳ ಸಂಬಳದಲ್ಲಿ ಪ್ರತಿ ತಿಂಗಳು 4,100 ರು ನಿಂದ 5,300 ರು ತನಕ ಏರಿಕೆಯಾಗಲಿದೆ. ಜುಲೈ 1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಜೊತೆಗೆ ಎಲ್ಲಾ ಉದ್ಯೋಗಿಗಳಿಗೂ 26 ತಿಂಗಳ ಬಾಕಿ ಮೊತ್ತ ಸಿಗಲಿದೆ.

ಗ್ರೂಪ್ ಎ ಹಾಗೂ ಗ್ರೂಪ್ ಬಿ ನೌಕರರಿಗೆ ಲಾಭ
ಇದರ ಜೊತೆಗೆ ಆದೇಶದ ಪ್ರಕಾರ, ಗ್ರೂಪ್ ಎ ಹಾಗೂ ಗ್ರೂಪ್ ಬಿ ನೌಕರರಿಗೆ(ಡಾಕ್ಟರ್, ನರ್ಸ್ ಹೊರತುಪಡಿಸಿ) ಆಸ್ಪತ್ರೆ ರೋಗಿಗಳ ಸುಶ್ರೂಷೆ ಭತ್ಯೆ(HPCA) ರೋಗಿಗಳ ಸುಶ್ರೂಷೆ ಭತ್ಯೆ(PCA) ಸಿಗಲಿದೆ. ಆದರೆ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿ ರಜೆ ತೆಗೆದುಕೊಂಡ ಸಿಬ್ಬಂದಿಗಳಿಗೆ ಈ ಭತ್ಯೆ ಲಭ್ಯವಾಗುವುದಿಲ್ಲ.

7ನೇ ವೇತನಾ ಆಯೋಗದ ಅನ್ವಯ ಬಾಕಿ ಮೊತ್ತ
7ನೇ ವೇತನಾ ಆಯೋಗದ ಅನ್ವಯ ಮ್ಯಾಟ್ರಿಕ್ಸ್ 8ನೇ ಸ್ತರ ಹಾಗೂ ಮೇಲ್ಪಟ್ಟವರಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 4,100 ರು ಹಾಗೂ 9ನೇ ಸ್ತರ ಹಾಗೂ ಮೇಲ್ಪಟ್ಟ ಸಿಬ್ಬಂದಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 5,300 ರು ಸಿಗಲಿದೆ.

ಕನಿಷ್ಟ ವೇತನ ಏರಿಕೆ ಬೇಡಿಕೆ ಈಡೇರಿಲ್ಲ
ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ
2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications