ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ನೌಕರರಿಗೆ ಡಬ್ಬಲ್ ಧಮಾಕ, ಡಿಎ, ಸಂಬಳ ಏರಿಕೆ!

|
Google Oneindia Kannada News

ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸರ್ಕಾರಿ ನೌಕರರಿಗೆ ಶೇ 4ರಷ್ಟು ಡಿಎ ಹೆಚ್ಚಳಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದಲ್ಲದೆ, ತುಟ್ಟಿಭತ್ಯೆ ಪರಿಹಾರ(ಡಿಆರ್) ಬಾಕಿಮೊತ್ತ ಕೂಡಾ ಲಭಿಸಲಿದೆ. ಜೊತೆಗೆ ಜನವರಿ 1, 2020 ಅನ್ವಯ ಸಂಬಳ ಏರಿಕೆಗೂ ಸಂಪುಟ ಒಪ್ಪಿಗೆ ನೀಡಿದೆ ಎಂಬ ಸುದ್ದಿ ಬಂದಿದೆ.

ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿತ್ತು. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಇನ್ನೂ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ.

ಕೇಂದ್ರ ಸರ್ಕಾರಿ ನೌಕರರಿಗೆ 8 ಸಾವಿರ ರು ಸಂಬಳ ಏರಿಕೆ?ಕೇಂದ್ರ ಸರ್ಕಾರಿ ನೌಕರರಿಗೆ 8 ಸಾವಿರ ರು ಸಂಬಳ ಏರಿಕೆ?

ಸದ್ಯದ ಮಾಹಿತಿಯಂತೆ ಡಿಎ ಶೇ 17ರಿಂದ ಶೇ 21ಕ್ಕೇರಿಕೆಯಾಗಲಿದೆ. ಡಿಎ ಹೆಚ್ಚಳ ಘೋಷಣೆಯಿಂದ ಕೇಂದ್ರ ಬೊಕ್ಕಸಕ್ಕೆ 12,150 ಕೋಟಿ ರು ಹೆಚ್ಚುವರಿ ಹೊರೆ ಬೀಳಲಿದೆ, ಕಳೆದ ಆರ್ಥಿಕ ವರ್ಷ 2020-21ರಲ್ಲಿ 14,595 ಕೋಟಿ ರು ನಷ್ಟಿತ್ತು. ಡಿಎ ಹೆಚ್ಚಳದಿಂದಾಗಿ 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65.26 ಲಕ್ಷ ಪಿಂಚಣಿದಾರರಿಗೆ ನೆರವು ಲಭಿಸಲಿದೆ. ಡಿಎ ಹೆಚ್ಚಳದ ಬಗ್ಗೆ ಮುಂಬರುವ ಬಜೆಟ್ 2021ರಲ್ಲಿ ಅಧಿಕೃತವಾಗಿ ಘೋಷಣೆ ಸಾಧ್ಯತೆಯಿದೆ.

ಹಣದುಬ್ಬರದ ಪರಿಣಾಮ ಎಲ್ಲವೂ ವ್ಯತ್ಯಯ

ಹಣದುಬ್ಬರದ ಪರಿಣಾಮ ಎಲ್ಲವೂ ವ್ಯತ್ಯಯ

ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.34 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.26 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ4.59 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು. ಆದರೆ, ಇದೆಲ್ಲವನ್ನು ಮೀರಿ ಮುಂದಿನ ಅವಧಿ ಜನವರಿ 2020ಕ್ಕೆ ಶೇ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ.

ಕನಿಷ್ಠ ವೇತನ ಬೇಡಿಕೆ ಈಡೇರಿಲ್ಲ

ಕನಿಷ್ಠ ವೇತನ ಬೇಡಿಕೆ ಈಡೇರಿಲ್ಲ

ಕೇಂದ್ರದ ಕಾರ್ಮಿಕ ಸಚಿವಾಲಯದ ಆಂತರಿಕ ಸಮಿತಿಯು ಜನವರಿಯಲ್ಲಿ ಬಿಡುಗಡೆ ಮಾಡಿದ ವರದಿಯಂತೆ, ಜುಲೈ 2018ರ ಪ್ರಕಾರ ಕನಿಷ್ಠ ವೇತನ 375 ರೂ., ಕನಿಷ್ಠ ಮಾಸಿಕ ವೇತನ 9,750 ರೂ ಹಾಗೂ ನಗರ ಮೂಲದ ಕಾರ್ಮಿಕರಿಗೆ 1,430 ರೂ. ವಸತಿ ಭತ್ಯೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆ ಇನ್ನೂ ಈಡೇರಿಲ್ಲ. ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆದಿದ್ದರೂ ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾಗುವುದಿಲ್ಲ.

ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ

ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ

ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆ ಬೇಡಿಕೆ ಇದ್ದೇ ಇದೆ. ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಈ ಕುರಿತಂತೆ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ

2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ. ಈಗ ತುಟ್ಟಿ ದರ (ಡಿಆರ್) ಈಗ ಶೇ 16ರಷ್ಟಾಗಿದೆ.

English summary
Two positive developments are likely with regard to the 7th Pay Commission. The first would be a 4 per cent hike in Dearness Allowance (DA), expected this month itself and the second would be the Dearness Relief (DR), which was approved by the Union Cabinet with effect from January 1 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X