ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೇತನ ಆಯೋಗದ ಅನ್ವಯ ಮಾರ್ಚ್ ತಿಂಗಳಲ್ಲಿ ತುಟ್ಟಿಭತ್ಯೆ, ಸಾರಿಗೆ ಭತ್ಯೆ ಹೆಚ್ಚಳ

|
Google Oneindia Kannada News

ನವದೆಹಲಿ, ಜನವರಿ 13: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರಿಗೆ ಈ ಬಾರಿ ಸಂಬಳ ಏರಿಕೆ ಘೋಷಣೆ ನಿರೀಕ್ಷೆಯಿಲ್ಲ. ಆದರೆ, ತುಟ್ಟಿಭತ್ಯೆ ಹೆಚ್ಚಳ ಖಾತ್ರಿಯಾಗಿದೆ.

ಆಯೋಗದ ಶಿಫಾರಸ್ಸಿನಂತೆ ನೌಕರರಿಗೆ18,000 ರು ಕನಿಷ್ಠ ವೇತನ ಪ್ರತಿ ತಿಂಗಳಿಗೆ ಸಿಗಲಿದೆ. ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿತ್ತು. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಇನ್ನೂ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ. ಈ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಸಾಧ್ಯತೆಯಿದೆ.

ಬಜೆಟ್ 2020: ಸುಳ್ಳಾದ ಸಂಬಳ ಏರಿಕೆ ನಿರೀಕ್ಷೆ, ಡಿಎ ಹೆಚ್ಚಳ ಎಷ್ಟು?ಬಜೆಟ್ 2020: ಸುಳ್ಳಾದ ಸಂಬಳ ಏರಿಕೆ ನಿರೀಕ್ಷೆ, ಡಿಎ ಹೆಚ್ಚಳ ಎಷ್ಟು?

ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಯಾವುದೇ ಸೂಚನೆ ಇಲ್ಲ. ಕೇಂದ್ರ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆ (Travel Allowance) ಕೂಡಾ ನೀಡಲಾಗುತ್ತಿದೆ. ಟಿಎ ಮೌಲ್ಯ ಸೇರಿಸಿದ ಬಳಿಕ ಸಂಬಳ 810 ರು ನಿಂದ 4,320ರುಗೇರಲಿದೆ. ಒಟ್ಟಾರೆ 720 ರು ನಿಂದ 10,000 ರು ತನಕ ಸಂಬಳ ಏರಿಕೆ ನಿರೀಕ್ಷೆಯಿದೆ.

ಎಷ್ಟು ಪ್ರಮಾಣದಲ್ಲಿ ತುಟ್ಟಿಭತ್ಯೆ

ಎಷ್ಟು ಪ್ರಮಾಣದಲ್ಲಿ ತುಟ್ಟಿಭತ್ಯೆ

ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟು ತುಟ್ಟಿಭತ್ಯೆ ಸಿಗಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್(Non Product linked) ನೀಡಲಾಗಿದೆ. ಜನವರಿ 2020 ರಿಂದ ಜೂನ್ 2020 ರ ಅವಧಿಗೆ ಶೇ 4 ರಷ್ಟು ಡಿಎ ಹೆಚ್ಚಳ ನಿರೀಕ್ಷೆಯಿದೆ.

ಹಣದುಬ್ಬರ ಸೂಚ್ಯಂಕ ಆಧಾರ

ಹಣದುಬ್ಬರ ಸೂಚ್ಯಂಕ ಆಧಾರ

ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ5 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು. ಆದರೆ, ಇದೆಲ್ಲವನ್ನು ಮೀರಿ ಮುಂದಿನ ಅವಧಿ ಜನವರಿ 2020ಕ್ಕೆ ಶೇ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ.

2020ರಲ್ಲಿ 7ನೇ ವೇತನ ಆಯೋಗದಿಂದ ನೌಕರರಿಗೇನು ನಿರೀಕ್ಷೆ?2020ರಲ್ಲಿ 7ನೇ ವೇತನ ಆಯೋಗದಿಂದ ನೌಕರರಿಗೇನು ನಿರೀಕ್ಷೆ?

ಸಂಬಳ ಏರಿಕೆ ಇಲ್ಲ

ಸಂಬಳ ಏರಿಕೆ ಇಲ್ಲ

ಕೇಂದ್ರದ ಕಾರ್ಮಿಕ ಸಚಿವಾಲಯದ ಆಂತರಿಕ ಸಮಿತಿಯು ಜನವರಿಯಲ್ಲಿ ಬಿಡುಗಡೆ ಮಾಡಿದ ವರದಿಯಂತೆ, ಜುಲೈ 2018ರ ಪ್ರಕಾರ ಕನಿಷ್ಠ ವೇತನ 375 ರೂ., ಕನಿಷ್ಠ ಮಾಸಿಕ ವೇತನ 9,750 ರೂ ಹಾಗೂ ನಗರ ಮೂಲದ ಕಾರ್ಮಿಕರಿಗೆ 1,430 ರೂ. ವಸತಿ ಭತ್ಯೆಯನ್ನು ನೀಡಬೇಕೆಂದು ಸೂಚಿಸಲಾಗಿದೆ.

ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆ ಇನ್ನೂ ಈಡೇರಿಲ್ಲ. ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆದಿದ್ದರೂ ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾಗುವುದಿಲ್ಲ.

ತುಟ್ಟಿಭತ್ಯೆ ಯಾವಾಗ

ತುಟ್ಟಿಭತ್ಯೆ ಯಾವಾಗ

ಲಭ್ಯ ಮಾಹಿತಿಯಂತೆ ಜೀ ಬಿಸಿನೆಸ್ ನ್ಯೂಸ್ ಗೆ ಮಾಜಿ ಎಜಿ ಹರೀಶ್ ತಿವಾರಿ ನೀಡಿದ ಪ್ರತಿಕ್ರಿಯೆ ಉಲ್ಲೇಖಿಸಿದರೆ ಮಾರ್ಚ್ ತಿಂಗಳಿನಲ್ಲಿ ಶೇ 4ರಷ್ಟು ತುಟ್ಟಿಭತ್ಯೆ ಸಿಗುವ ಸಾಧ್ಯತೆಯಿದೆ. ಡಿಎ ಶೇ 17ರಷ್ಟು ಪ್ರಮಾಣದಲ್ಲಿ ಸಿಗಬಹುದು. ಆದರೆ, ಡಿಎ ಪ್ರಮಾಣ ಶೇ 4ಕ್ಕೇರಿದರೆ ತುಟ್ಟಿ ದರ ಶೇ 21ಕ್ಕೇರಲಿದೆ.

English summary
The Central Government employees have resigned to their fate that there may not be a salary increase as has been demanded. However, they are hopeful that at least their DA would increase.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X