• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ತುಟ್ಟಿಭತ್ಯೆ ಹೆಚ್ಚಳದ ನಂತರ ಸರ್ಕಾರಿ ನೌಕರರ ನಿರೀಕ್ಷೆಯೇನು?

|

ನವದೆಹಲಿ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕೊನೆಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕನಿಷ್ಟ ವೇತನ ಏರಿಕೆ ಮಾಡುವ ನಿರೀಕ್ಷೆಯಿತ್ತು. ಆದರೆ, ಸರ್ಕಾರಿ ನೌಕರರ ನಿರೀಕ್ಷೆ ಸುಳ್ಳಾಗಿದೆ. ಆದರೆ, ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ.

ಜನವರಿ 1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಈ ನಿರ್ಧಾರದಿಂದ ಕೇಂದ್ರ ಸರಕಾರದ ಮೇಲೆ 9000 ಕೋಟಿ ರುಪಾಯಿ ಹೆಚ್ಚುವರಿ ಹೊರೆ ಬೀಳಲಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು.

ಸರ್ಕಾರಿ ನೌಕರರ ಸಂಬಳ ಏರಿಕೆ, ಬಿಜೆಪಿಯ 'ಮಹಾ' ರಣತಂತ್ರ!

ಸಂಬಳದಾರ ಮಧ್ಯಮ ವರ್ಗದವರಿಗೆ ಬಜೆಟ್ 2018ರಲ್ಲಿ ಅರುಣ್ ಜೇಟ್ಲಿ ಏನು ಕೊಟ್ಟಿಲ್ಲ ಎಂಬ ದೊಡ್ಡ ಆರೋಪ ಕೇಳಿ ಬಂದಿತ್ತು. ಇದನ್ನು ಸರಿದೂಗಿಸಲು ಮೋದಿ ಸರ್ಕಾರವು ಈ ಬಾರಿ ಸಂಬಳದಾರರಿಗೆ ಸಂತಸದ ಸುದ್ದಿಯನ್ನು ನೀಡಿದ್ದಾರೆ. ಆದರೆ, ಕೇಂದ್ರ ಸರ್ಕಾರಿ ನೌಕರರರ ವೇತನ ಏರಿಕೆ ಬಗ್ಗೆ ಯಾವುದೇ ಹೇಳಿಕೆ ಇಲ್ಲ.

ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆ ಬೇಡಿಕೆ ಇದ್ದೇ ಇದೆ.

ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿರುವುದರಿಂದ ಡಿಎ ಹಾಗೂ ತುಟ್ಟಿ ದರ (ಡಿಆರ್) ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಲಿದೆ. ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ5 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು.

ಕನಿಷ್ಟ ವೇತನ ದರ ಏರಿಕೆ ಸಾಧ್ಯತೆಯಿಲ್ಲ

ಕನಿಷ್ಟ ವೇತನ ದರ ಏರಿಕೆ ಸಾಧ್ಯತೆಯಿಲ್ಲ

ಕೇಂದ್ರ ಸರ್ಕಾರಿ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ, ಫಿಟ್ಮೆಂಟ್ ಫಾರ್ಮ್ಯೂಲಾದಂತೆ ಮೂಲ ವೇತನದ 2.57ರಂತೆ ವೇತನ ಪಡೆಯುತ್ತಿದ್ದಾರೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿ ಅನುಷ್ಠಾನವಾಗಲಿದ್ದು, ಆಯೋಗದ ಶಿಫಾರಸು ಮೀರಿ ಕನಿಷ್ಠ ವೇತನವನ್ನು 18,000 ರೂ.ನಿಂದ 21,000 ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇತ್ತು. ಆದರೆ, ಈ ಬಗ್ಗೆ ಯಾವುದೇ ಘೋಷಣೆಯಾಗಿಲ್ಲ.

ಸಂಬಳ ಏರಿಕೆಗೆ ಕಾದಿದ್ದವರಿಗೆ ತುಟ್ಟಿ ಭತ್ಯೆ ಹೆಚ್ಚಿಸಿದ ಮೋದಿ

ಸರ್ಕಾರಿ ನೌಕರರ ಬಹುಕಾಲದ ಬೇಡಿಕೆ

ಸರ್ಕಾರಿ ನೌಕರರ ಬಹುಕಾಲದ ಬೇಡಿಕೆ

ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ಸರ್ಕಾರದ ಬೊಕ್ಕಸಕ್ಕೆ ಎಷ್ಟು ಹೊರೆ?

ಸರ್ಕಾರದ ಬೊಕ್ಕಸಕ್ಕೆ ಎಷ್ಟು ಹೊರೆ?

ಕೇಂದ್ರ ಸರ್ಕಾರಿ ನೌಕರರು ತಾವಿರುವ ನಗರಗಳ ಆಧಾರದ ಮೇಲೆ ಶೇ. 45ರವರೆಗೆ ಹೆಚ್ಚಿನ ಸಂಬಳ ಪಡೆಯಲಿದ್ದಾರೆ. 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ,53 ಲಕ್ಷ ಕೇಂದ್ರದ ಪಿಂಚಣಿದಾರರು, ಸೇನಾ ವಲಯದ 14 ಲಕ್ಷ ಸಿಬ್ಬಂದಿಗೆ ಇದರ ಲಾಭಗಳಾಗಲಿದ್ದು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 30,748 ಕೋಟಿ ರು. ಹೊರೆ ಬೀಳಲಿದೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿಯ ಅನುಸಾರ ವೇತನ ಹೆಚ್ಚಳವಾಗಲಿದೆ. ಆದರೆ, ಕನಿಷ್ಟ ವೇತನ ಏರಿಕೆಯಾಗಿಲ್ಲ.

ನಿವೃತ್ತಿ ವಯಸ್ಸು ಹೆಚ್ಚಳದ ಬೇಡಿಕೆ

ನಿವೃತ್ತಿ ವಯಸ್ಸು ಹೆಚ್ಚಳದ ಬೇಡಿಕೆ

2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ.

ಸಂಬಳ ಏರಿಕೆಗೆ ಕಾದಿದ್ದವರಿಗೆ ತುಟ್ಟಿ ಭತ್ಯೆ ಹೆಚ್ಚಿಸಿದ ಮೋದಿ

English summary
The Union Cabinet increased the dearness allowance (DA) by three percent and said that it would effective from January 1 2019. The move is set to benefit at least 1.1 crore Central Government employees and pensioners.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more