ಸರ್ಕಾರಿ ನೌಕರರಿಗೆ ಶುಭ ಸುದ್ದಿ, ಭತ್ಯೆಯಲ್ಲಿ 5 ಪಟ್ಟು ಹೆಚ್ಚಳ
Recommended Video
ನವದೆಹಲಿ, ಏಪ್ರಿಲ್ 22: 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ನಿರೀಕ್ಷೆಯಲ್ಲಿದ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ಸೋಮವಾರ(ಏಪ್ರಿಲ್ 22) ಶುಭ ಸುದ್ದಿ ಸಿಕ್ಕಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸರ್ಕಾರಿ ನೌಕರರ ಭತ್ಯೆ ಹೆಚ್ಚಳ ಕುರಿತಂತೆ ಹೊಸದಾದ ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕ ಕುಂದು ಕೊರತೆ ಹಾಗೂ ಪಿಂಚಣಿ ಇಲಾಖೆ ಹೊರಡಿಸಿರುವ ಪ್ರಕಟಣೆಯಂತೆ ಐದು ಪಟ್ಟು ಭತ್ಯೆ ಹೆಚ್ಚಳ ಸಿಗಲಿದೆ. ಸರ್ಕಾರಿ ಹುದ್ದೆ ಸೇರಿದ ಬಳಿಕ ಸ್ನಾತಕೋತ್ತರ ಪದವಿ ಪಡೆದವರಿಗೆ ಈ ಸೌಲಭ್ಯ ಸಿಗಲಿದೆ.
ಇದೀಗ ಉನ್ನತ ಪದವಿ ಪಡೆದವರಿಗೆ 10,000 ರು ನಿಂದ 30,000 ರು ತನಕ ಲಂಪ್ ಸಮ್ ನಂತೆ ಒಮ್ಮೆಗೆ ಭತ್ಯೆ ಸಿಗಲಿದೆ. ಪದವಿ ಅಥವಾ ಮೂರು ವರ್ಷಗಳ ಅವಧಿ ಅಥವಾ ಅದಕ್ಕಿಂತ ಕೆಳಮಟ್ಟದಾ ತತ್ಸಮಾನ ಅರ್ಹತೆಯುಳ್ಳವರಿಗೆ ಕನಿಷ್ಠ 10,000 ರು ಭತ್ಯೆ ಸಿಗಲಿದೆ.
7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕನಿಷ್ಠ ವೇತನವನ್ನು 18,000ರು ನಿಂದ 26,000 ರು ಗೇರಿಸುವಂತೆ ಕೋರಲಾಗಿದೆ. ಎಷ್ಟು ವ್ಯಾಸಂಗ ಮಾಡಿದವರಿಗೆ ಎಷ್ಟು ಪ್ರಮಾಣದಲ್ಲಿ ಮೊತ್ತ ಸಿಗಲಿದೆ ಎಂಬ ವಿವರ ಮುಂದಿದೆ...

ಭತ್ಯೆ ಹೊಸ ಪಟ್ಟಿ
* ಪಿಎಚ್ ಡಿ ಅಥವಾ ತತ್ಸಮಾನ ಹೊಂದಿದವರಿಗೆ : 30,000 ರು
* ಪಿಜಿ ಡಿಗ್ರಿ/ ಡಿಪ್ಲೋಮಾ (ಒಂದು ವರ್ಷಕ್ಕಿಂತ ಅಧಿಕ ಆವಧಿ): 25,000 ರು
* ಪಿಜಿ ಡಿಗ್ರಿ/ ಡಿಪ್ಲೋಮಾ (ಒಂದು ವರ್ಷಕ್ಕಿಂತ ಕಡಿಮೆ ಆವಧಿ): 20,000 ರು
* ಡಿಗ್ರಿ/ ಡಿಪ್ಲೋಮಾ (ಮೂರು ವರ್ಷಕ್ಕಿಂತ ಅಧಿಕ ಆವಧಿ ಅಥವಾ ತತ್ಸಮಾನ): 15,000ರು
* ಡಿಗ್ರಿ/ ಡಿಪ್ಲೋಮಾ (ಮೂರು ವರ್ಷಕ್ಕಿಂತ ಕಡಿಮೀ ಆವಧಿ): 10,000 ರು

ಯಾವುದೇ ಘೋಷಣೆಗೆ ಅವಕಾಶ ಸಿಗಲಿಲ್ಲ
ಕೇಂದ್ರ ಸರ್ಕಾರಿ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ, ಫಿಟ್ಮೆಂಟ್ ಫಾರ್ಮ್ಯೂಲಾದಂತೆ ಮೂಲ ವೇತನದ 2.57ರಂತೆ ವೇತನ ಪಡೆಯುತ್ತಿದ್ದಾರೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿ ಅನುಷ್ಠಾನವಾಗಲಿದ್ದು, ಆಯೋಗದ ಶಿಫಾರಸು ಮೀರಿ ಕನಿಷ್ಠ ವೇತನವನ್ನು 18,000 ರೂ.ನಿಂದ 21,000 ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇತ್ತು. ಆದರೆ, ಈ ಬಗ್ಗೆ ಯಾವುದೇ ಘೋಷಣೆಯಾಗಲಿಲ್ಲ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಗೊಂಡು ಯಾವುದೇ ಘೋಷಣೆಗೆ ಅವಕಾಶ ಸಿಗಲಿಲ್ಲ

ಕನಿಷ್ಠ ವೇತನ ಹೆಚ್ಚಳ ನಿರೀಕ್ಷೆ ಹುಸಿ
ಕನಿಷ್ಠ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ನೌಕರರರ ವೇತನ ಏರಿಕೆ ಬಗ್ಗೆ ಯಾವುದೇ ಹೇಳಿಕೆ ಇಲ್ಲ
ಕೆಳ ಹಂತದ ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಕನಿಷ್ಟ ವೇತನವನ್ನು ಪರಿಷ್ಕರಣೆ ಮಾಡಲಾಗುತ್ತಿದೆ. 7 ನೇ ವೇತನ ಆಯೋಗ ಮಾಡಿರುವ ಶಿಫಾರಸ್ಸು ಮೀರಿ ನೌಕರರಿಗೆ ಕನಿಷ್ಠ ವೇತನ ನಿಗದಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಅವರು ಸಂಸತ್ತಿನಲ್ಲಿ ಭರವಸೆ ನೀಡಿದ್ದರು. ಸಂಬಳದಾರ ಮಧ್ಯಮ ವರ್ಗದವರಿಗೆ ಬಜೆಟ್ 2018ರಲ್ಲಿ ಅರುಣ್ ಜೇಟ್ಲಿ ಏನು ಕೊಟ್ಟಿಲ್ಲ ಎಂಬ ದೊಡ್ಡ ಆರೋಪ ಕೇಳಿ ಬಂದಿತ್ತು. ಇದನ್ನು ಸರಿದೂಗಿಸಲು ಮೋದಿ ಸರ್ಕಾರವು ಈ ಬಾರಿ ಸಂಬಳದಾರರಿಗೆ ಸಂತಸದ ಸುದ್ದಿಯನ್ನು ನೀಡಿದ್ದಾರೆ. ಆದರೆ, ಕೇಂದ್ರ ಸರ್ಕಾರಿ ನೌಕರರರ ವೇತನ ಏರಿಕೆ ಬಗ್ಗೆ ಯಾವುದೇ ಹೇಳಿಕೆ ಇಲ್ಲ.

ನಿವೃತ್ತಿ ವೇತನ ಹೆಚ್ಚಳದ ಬೇಡಿಕೆ
2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications