ಮೋದಿ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮತ್ತೆ ಸಿಹಿ ಸುದ್ದಿ

ನವದೆಹಲಿ, ಮಾರ್ಚ್ 07: ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಮತ್ತೊಮ್ಮೆ ಸಿಹಿಸುದ್ದಿ ನೀಡಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ವೇತನ ಏರಿಕೆಯ ಲೆಕ್ಕಾಚಾರ ಹಾಕುತ್ತಿರುವ ನೌಕರರಿಗೆ ಈಗ ತುಟ್ಟಿಭತ್ಯೆ ಹೆಚ್ಚಳವಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಶೇ 2 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಶಿಫಾರಸ್ಸಿಗೆ ಒಮ್ಮತದ ಅನುಮೋದನೆ ಸಿಕ್ಕಿತು.

ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಲಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ.

7th Pay Commission: Govt set to hike DA by 2 per cent for CG employees, pensioners

7ನೇ ವೇತನ ಆಯೋಗದ ಫಿಟ್ಮೆಂಟ್ ಫಾರ್ಮೂಲಾದ ಆನುಗುಣವಾಗಿ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ತುಟ್ಟಿಭತ್ಯೆ ಹೆಚ್ಚಳದಿಂದಾಗಿ ಸರ್ಕಾರಿ ಬೊಕ್ಕಸಕ್ಕೆ 6,077ಕೋಟಿ ರು ಹೆಚ್ಚಿನ ಹೊರೆ ಬೀಳಲಿದೆ.

ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಗಮನಿಸಿದರೆ ತುಟ್ಟಿ ಭತ್ಯೆ ಏರಿಕೆಯಿಂದ ಕಾರ್ಮಿಕರು ಸಂತುಷ್ಟರಾಗುವುದಿಲ್ಲ ಎಂದು ಕೇಂದ್ರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಕೆ.ಎನ್.ಕುಟ್ಟಿ ಅವರು ಪ್ರತಿಕ್ರಿಯಿಸಿದ್ದಾರೆ.

ತುಟ್ಟಿ ಭತ್ಯೆ(dearness allowance): ತುಟ್ಟಿ ಭತ್ಯೆಯನ್ನು 12 ತಿಂಗಳಿನ ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇರೆಗೆ ನಿಗದಿಪಡಿಸಲಾಗುತ್ತದೆ.

ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕವಾಗಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+