7th Pay Commission: 15 ವರ್ಷಗಳ ಬಳಿಕ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಮತ್ತು ಸಾರಿಗೆ ಭತ್ಯೆಗಳ ಹೆಚ್ಚಳ
7th Pay Commission: ಸರ್ಕಾರವು ಸರ್ಕಾರಿ ನೌಕರರಿಗೆ ಶುಭಸುದ್ದಿಗಳನ್ನು ನೀಡುತ್ತಲೇ ಇರುತ್ತದೆ. ಇದೀಗ ಈ ಸರ್ಕಾರವು ತನ್ನ ಉದ್ಯೋಗಿಗಳಿಗೆ 15 ವರ್ಷಗಳ ಬಳಿಕ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ ಮತ್ತು ಸಾರಿಗೆ ಭತ್ಯೆಯಲ್ಲಿ ಏರಿಕೆ ಮಾಡಿದೆ. ಹಾಗಾದ್ರೆ ಎಷ್ಟು ಎನ್ನುವ ಮಾಜಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ 15 ವರ್ಷಗಳ ನಂತರ ಮಧ್ಯಪ್ರದೇಶ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರಾಜ್ಯದ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ ಮತ್ತು ಸಾರಿಗೆ ಭತ್ಯೆಯಲ್ಲಿ ಏರಿಕೆ ಮಾಡಿದೆ. ಸಿಎಂ ಡಾ. ಮೋಹನ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇದರಿಂದ ರಾಜ್ಯದ ಸರ್ಕಾರಿ ನೌಕರರು ಮತ್ತು ಕಾರ್ಮಿಕರು ಸಂತಸಗೊಂಡಿದ್ದಾರೆ.

7ನೇ ವೇತನ ಆಯೋಗದಡಿ ಮಧ್ಯಪ್ರದೇಶ ಸರ್ಕಾರವು ರಾಜ್ಯದ ಸರ್ಕಾರಿ ಉದ್ಯೋಗಿಗಳ ವೇತನವನ್ನು ಪರಿಷ್ಕರಣೆ ಮಾಡಿದೆ. ಹೊಸ ವೇತನ ಶ್ರೇಣಿಯು ಏಪ್ರಿಲ್ 1, 2025ರಿಂದ ಜಾರಿಗೆ ಬರಲಿದ್ದು, ಇದರಿಂದ ಸರ್ಕಾರಿ ನೌಕರರ ಭರ್ಜರಿ ಶುಭ ಸುದ್ದಿ ಸಿಕ್ಕಂತಾಗಿದೆ.
* ಮೊದಲಿಗೆ ಕೌಶಲ್ಯರಹಿತ ಕೆಲಸಗಾರರ ದೈನಂದಿನ ಸಂಬಳ 368.27 ರೂಪಾಯಿ ಇತ್ತು. ಇದೀಗ ಇದು 466.35 ರೂಪಾಯಿಗೆ ಏರಿಕೆಯಾಗಿದ್ದು, ಮಾಸಿಕ ಸಂಬಳ 12,125 ರೂಪಾಯಿ ಆದಂತಾಗಿದೆ.
* ಮೊದಲಿಗೆ ಅರೆ ಕೌಶಲ್ಯಪೂರ್ಣ ಕೆಲಸಗಾರರ ದಿನದ ಸಂಬಳ 406.58 ರೂಪಾಯಿ ಇತ್ತು. ಇದೀಗ ಇದನ್ನು 505.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 13,121 ರೂಪಾಯಿ ಆದಂತಾಗಿದೆ.
* ಮೊದಲಿಗೆ ಕೌಶಲ್ಯಪೂರ್ಣ ಕೆಲಸಗಾರರಿಗೆ 472.85 ರೂಪಾಯಿ ದಿನದ ವೇತನ ಇತ್ತು. ಇದೀಗ 571.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 14,844 ರೂಪಾಯಿ ಆದಂತಾಗಿದೆ.
* ಮೊದಲಿಗೆ ಹೆಚ್ಚು ಕೌಶಲ್ಯಪೂರ್ಣ ಕೆಲಸಗಾರರಿಗೆ 535.35 ರೂಪಾಯಿ ದೈನಂದಿನ ಸಂಬಳ ಇತ್ತು. ಇದೀಗ 633.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 16,469 ರೂಪಾಯಿ ಆಗಿದೆ. ಇನ್ನು ಈ ಹೊಸ ವೇತನ ಶ್ರೇಣಿಯು ಉದ್ಯೋಗಿಗಳ ಆರ್ಥಿಕ ಸ್ಥಿತಿ ಜೊತೆಗೆ ಅವರ ಜೀವನ ಮಟ್ಟವನ್ನು ಸುಧಾರಿಸಲಿದೆ.
ಇನ್ನು ಈ ವೇತನ ಮತ್ತು ಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರದ ಹಣಕಾಸಿನ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಸಚಿವ ಕೈಲಾಶ್ ವಿಜಯವರ್ಗಿಯ ಅವರ ಪ್ರಕಾರ, ವೇತನ ಏರಿಕೆಯಿಂದ ರಾಜ್ಯದ ಬೊಕ್ಕಸದ ಮೇಲೆ ವಾರ್ಷಿಕ 1,500 ಕೋಟಿ ರೂಪಾಯಿಗಳ ಹೆಚ್ಚುವರಿಯಾಗಿ ಹೊರೆ ಬೀಳಲಿದೆ. ಆದರೆ, ಉದ್ಯೋಗಿಗಳ ಯೋಗಕ್ಷೇಮಕ್ಕಾಗಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿರುವುದು ಸ್ವಾಗತಾರ್ಹ ಅಂತಾ ಹೇಳಿದ್ದಾರೆ.
ಮಧ್ಯಪ್ರದೇಶ ಕರ್ಮಚಾರಿ ಮಂಚ್‌ನ ಮುಖ್ಯಸ್ಥ ಅಶೋಕ್ ಪಾಂಡೆ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಈ ವೇತನ ಹೆಚ್ಚಳದ ನಿರ್ಧಾರವು ಸರ್ಕಾರಿ ನೌಕರರು ಮತ್ತು ಕಾರ್ಮಿಕರಿಗೆ ತುಂಬಾ ಉಪಯುಕ್ತವಾಗಲಿದೆ. ಹಣದುಬ್ಬರದ ಸಮಯದಲ್ಲಿ ಇಂತಹ ನಿರ್ಧಾರವು ಉದ್ಯೋಗಿಗಳ ಜೀವನವನ್ನು ಸುಧಾರಿಸಲಿದೆ ಹೇಳಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications