ಸಂಬಳ ಏರಿಕೆಗೆ ಕಾದಿದ್ದವರಿಗೆ ತುಟ್ಟಿ ಭತ್ಯೆ ಹೆಚ್ಚಿಸಿದ ಮೋದಿ
ನವದೆಹಲಿ, ಆಗಸ್ಟ್ 29: ಸ್ವಾತಂತ್ರ್ಯೋತ್ಸವ ದಿನದಂದು ಪ್ರಧಾನಿ ಮೋದಿ ಅವರಿಂದ ಶುಭ ಸುದ್ದಿ ನಿರೀಕ್ಷಿಸಿ, ನಿರಾಶೆಗೊಂಡಿದ್ದ ಕೇಂದ್ರ ಸರ್ಕಾರಿ ನೌಕರರಿಗೆ ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಿದೆ. ನೌಕರರಿಗೆ ಶೇ2ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ.
ಬುಧವಾರದಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಜುಲೈ 01, 2018ರಿಂದ ಅನ್ವಯವಾಗಲಿದೆ.
7ನೇ ವೇತನ ಆಯೋಗದ ಶಿಫಾರಸ್ಸುಗಳು ಜಾರಿಗೆ ಬಂದಿಲ್ಲ ಎಂದು ಪ್ರತಿಭಟನೆಗೆ ಮುಂದಾಗಿದ್ದ ಶಿಕ್ಷಕ ವರ್ಗದವರು ಈಗ, ಮುಷ್ಕರ ಹಿಂಪಡೆಯುವ ಸಾಧ್ಯತೆಯಿದೆ. ಬಹುನಿರೀಕ್ಷಿತ ಸರ್ಕಾರಿ ನೌಕರರ ವೇತನ ಏರಿಕೆ, ನಿವೃತ್ತಿ ವಯೋಮಿತಿ ಹೆಚ್ಚಳದ ಬಗ್ಗೆ ಯಾವುದೇ ಸುಳಿವು ನೀಡಲಿಲ್ಲ. ಕಳೆದ ಜುಲೈನಲ್ಲಿ 7ನೇ ವೇತನ ಆಯೋಗದ ಶಿಫಾರಸು ಅನುಷ್ಠಾನ ಕುರಿತಂತೆ ಸಭೆ ನಡೆದಿತ್ತು. ಇದಾದ ಬಳಿಕ, ಆಗಸ್ಟ್ 29ರಂದು ಸಭೆ ನಡೆಸಲಾಯಿತು.
7ನೇ ವೇತನ ಆಯೋಗದ ಬಹು ನಿರೀಕ್ಷಿತ ಶಿಫಾರಸ್ಸಿನ ಅನ್ವಯ ಸುಮಾರು 1 ಕೋಟಿಗೂ ಮಂದಿಗೆ ಲಾಭವಾಗಲಿರುವ ನಿವೃತ್ತಿ ವಯಸ್ಸು ಏರಿಕೆ(60 ರಿಂದ 62ಕ್ಕೆ) ಬೇಡಿಕೆಗೆ ಮೋದಿ ಅವರು ಅಸ್ತು ಎಂದಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ಯಾವುದರ ಬಗ್ಗೆ ಕೂಡಾ ಘೋಷಣೆ ಕೇಳಿ ಬಂದಿಲ್ಲ.

1.1 ಕೋಟಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ನೆರವು
ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಶೇ.2ರಷ್ಟು ಹೆಚ್ಚಳ ಮಾಡಲಾಗಿದೆ. ಇದರಿಂದ ಸುಮಾರು 1.1 ಕೋಟಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ನೆರವಾಗಲಿದ್ದು, ಕೇಂದ್ರ ಸರ್ಕಾರದ ಮೇಲೆ ವಾರ್ಷಿಕಾಗಿ 6,112.20 ಕೋಟಿ ರೂ. ಹೆಚ್ಚಿನ ಹೊರೆ ಬೀಳಲಿದೆ.
2013-14ರಲ್ಲಿ 63,000 ಕೋಟಿ ಇದ್ದ ಇಲಾಖೆಯ ಬಹೆಟ್ ಈಗ 2018-19ರಲ್ಲಿ 110 ಲಕ್ಷ ಕೋಟಿಗೆ ಏರಿಕೆಯಾಗಿದೆ.

ವೇತನ ಹೆಚ್ಚಳ, ಸೇರಿದಂತೆ ಬೇಡಿಕೆಗಳೇನು?
2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ.

ವರ್ಷಕ್ಕೆ ಎರಡು ಬಾರಿ ಸಂಬಳ ಏರಿಕೆ ಇಲ್ಲ
7ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಸಂಬಳ ಏರಿಕೆ ಮಾಡುವುದರ ಜತೆಗೆ ವರ್ಷಕ್ಕೆರಡು ಬಾರಿ ಸಂಬಳ ಏರಿಕೆ(ಜನವರಿ ಹಾಗೂ ಜುಲೈ) ಜೀವನ ಮಟ್ಟ ಸೂಚಿ ಅನ್ವಯ ವೇತನ ಏರಿಕೆಯಾಗಲಿದೆ. ಇದು ಅತಿಥಿ ಶಿಕ್ಷಕರು (ಜೆಬಿಟಿ/ಡ್ರಾಯಿಂಗ್ ಟೀಚರ್, ಮಾಸ್ಟರ್ ಅಥವಾ ಉಪನ್ಯಾಸಕರು) 26,000ರು, 30,000 ಹಾಗೂ 36,000 ರು ಪಡೆಯಲಿದ್ದು, ಜುಲೈ 01, 2018ರಿಂದ ಅನ್ವಯವಾಗಲಿದೆ ಎಂಬ ಸುದ್ದಿ ಇತ್ತು. ಆದರೆ, ಸದ್ಯಕ್ಕೆ ಇದರ ಬಗ್ಗೆ ಯಾವುದೇ ಘೋಷಣೆ ಕೇಳಿ ಬಂದಿಲ್ಲ. ಸರ್ಕಾರವು ಆದೇಶ ಹೊರಡಿಸಿಲ್ಲ.

25 ಸಾವಿರ ಪಿಂಚಣಿದಾರರಿಗೆ ಲಾಭ
ಕೇಂದ್ರ ವಿಶ್ವವಿದ್ಯಾಲಯದ ಶಿಕ್ಷಣ ಸಂಸ್ಥೆಗಳಿಂದ ನಿವೃತ್ತಿ ಹೊಂದಿದ ಬೋಧಕ ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಅನ್ವಯ ಪಿಂಚಣಿ ಸಿಗಲಿದೆ. ಸುಮಾರು 25,000 ಪಿಂಚಣಿದಾರರಿಗೆ 6,000 ರು ನಿಂದ 18,000 ರುಗಳ ತನಕ ಪಿಂಚಣಿ ಸಿಗಲಿದೆ. ಇದು ಪರೋಕ್ಷವಾಗಿ ರಾಜ್ಯ ವಿಶ್ವವಿದ್ಯಾಲಯಗಳಿಂದ ನಿವೃತ್ತಿ ಹೊಂದಿದ 23 ಲಕ್ಷಕ್ಕೂ ಅಧಿಕ ಸಿಬ್ಬಂದಿಗಳಿಗೂ ಅನ್ವಯವಾಗಲಿದೆ.
8 ಲಕ್ಷ ಶಿಕ್ಷಕರಿಗೆ ಸಂಬಳ ಏರಿಕೆ ಬಗ್ಗೆ ಇನ್ನೂ ಸಂಪೂರ್ಣ ಅನುಷ್ಠಾನ ಸಾಧ್ಯವಾಗಿಲ್ಲ. ಅಕ್ಟೋಬರ್ 2017ರಂದು 7ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ, ಯೂನಿವರ್ಸಿಟಿ ಗ್ರಾಂಟ್ ಕಮಿಷನ್(ಯುಜಿಸಿ) ಹಾಗೂ ಯುಜಿಸಿ ನೆರವು ಪಡೆದ ವಿದ್ಯಾಸಂಸ್ಥೆಗಳಿಗೆ ಸೇರಿದ 8 ಲಕ್ಷ ಶಿಕ್ಷಣ ವರ್ಗಕ್ಕೆ 10,400 ಹಾಗೂ 49,800 ತನಕ ಸಿಗಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications