ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿರೀಕ್ಷೆಗೂ ಮೀರಿ ತುಟ್ಟಿಭತ್ಯೆ ಹೆಚ್ಚಳ, ಮೋದಿ ಸರ್ಕಾರದ ಗಿಫ್ಟ್!

|
Google Oneindia Kannada News

ನವದೆಹಲಿ, ಆಗಸ್ಟ್ 14: ಸ್ವಾತಂತ್ರ್ಯೋತ್ಸವಕ್ಕೂ ಮುನ್ನ ಮಧ್ಯಮವರ್ಗೀಯ ಸಂಬಳದಾರರಿಗೆ ಉಡುಗೊರೆ ನೀಡಲು ನರೇಂದ್ರ ಮೋದಿ ನಿರ್ಧರಿಸಿದೆ. ಇದಕ್ಕಾಗಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಆದರೆ, ಸರ್ಕಾರಿ ನೌಕರರ ನಿರೀಕ್ಷೆಗೂ ಮೀರಿದ ಪ್ರಮಾಣದಲ್ಲಿ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗುತ್ತಿದೆ.

16 ಲಕ್ಷ ಸರ್ಕಾರಿ ಉದ್ಯೋಗಿಗಳಿಗೆ ಸಿಹಿ ಸುದ್ದಿ ಕೊಟ್ಟ ಯೋಗಿ 16 ಲಕ್ಷ ಸರ್ಕಾರಿ ಉದ್ಯೋಗಿಗಳಿಗೆ ಸಿಹಿ ಸುದ್ದಿ ಕೊಟ್ಟ ಯೋಗಿ

ಸರ್ಕಾರಿ ನೌಕರರಿಗೆ ಸ್ವಾತಂತ್ರ್ಯೋತ್ಸವದ ಉಡುಗೊರೆ ರೂಪದಲ್ಲಿ ಕನಿಷ್ಟ ವೇತನ ಏರಿಕೆ ಮಾಡುವ ನಿರೀಕ್ಷೆಯಿತ್ತು. ಆದರೆ, ಸರ್ಕಾರಿ ನೌಕರರ ನಿರೀಕ್ಷೆ ಸುಳ್ಳಾಗಿದೆ. ಆದರೆ, ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾತ್ರ ಖಾತ್ರಿಯಾಗಿದೆ. ಜನವರಿ 1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಈ ನಿರ್ಧಾರದಿಂದ ಕೇಂದ್ರ ಸರಕಾರದ ಮೇಲೆ 9000 ಕೋಟಿ ರುಪಾಯಿ ಹೆಚ್ಚುವರಿ ಹೊರೆ ಬೀಳಲಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು.

ಇದಲ್ಲದೆ, ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆ ಬೇಡಿಕೆ ಇದ್ದೇ ಇದೆ.

ಶೇ 5ರಷ್ಟು ತುಟ್ಟಿಭತ್ಯೆ ಹೆಚ್ಚಳ

ಶೇ 5ರಷ್ಟು ತುಟ್ಟಿಭತ್ಯೆ ಹೆಚ್ಚಳ

ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದರೆ ಡಿಎ ಹಾಗೂ ತುಟ್ಟಿ ದರ (ಡಿಆರ್) ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಲಿದೆ. ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ5 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು. ಆದರೆ, ಇದೆಲ್ಲವನ್ನು ಮೀರಿ ಶೇ 5ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗುವ ಸುದ್ದಿ ಸಿಕ್ಕಿದೆ. ಆಗಸ್ಟ್ ಅಂತ್ಯಕ್ಕೆ ಅಧಿಕೃತ ಆದೇಶ ಹೊರ ಬರಲಿದೆ.

ಕನಿಷ್ಠ ವೇತನ ಏರಿಕೆ ಬೇಡಿಕೆ ಹಾಗೆ ಇದೆ

ಕನಿಷ್ಠ ವೇತನ ಏರಿಕೆ ಬೇಡಿಕೆ ಹಾಗೆ ಇದೆ

ಕೇಂದ್ರ ಸರ್ಕಾರಿ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ, ಫಿಟ್ಮೆಂಟ್ ಫಾರ್ಮ್ಯೂಲಾದಂತೆ ಮೂಲ ವೇತನದ 2.57ರಂತೆ ವೇತನ ಪಡೆಯುತ್ತಿದ್ದಾರೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿ ಅನುಷ್ಠಾನವಾಗಲಿದ್ದು, ಆಯೋಗದ ಶಿಫಾರಸು ಮೀರಿ ಕನಿಷ್ಠ ವೇತನವನ್ನು 18,000 ರೂ.ನಿಂದ 21,000 ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇತ್ತು. ಆದರೆ, ಈ ಬಗ್ಗೆ ಯಾವುದೇ ಘೋಷಣೆಯಾಗಿಲ್ಲ.

ಯಾವ ಫಿಟ್ಮೆಂಟ್ ನಂತೆ ಸಿಗಲಿದೆ

ಯಾವ ಫಿಟ್ಮೆಂಟ್ ನಂತೆ ಸಿಗಲಿದೆ

ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ಎಷ್ಟು ಲಕ್ಷ ಮಂದಿಗೆ ಅನುಕೂಲ

ಎಷ್ಟು ಲಕ್ಷ ಮಂದಿಗೆ ಅನುಕೂಲ

ಕೇಂದ್ರ ಸರ್ಕಾರಿ ನೌಕರರು ತಾವಿರುವ ನಗರಗಳ ಆಧಾರದ ಮೇಲೆ ಶೇ. 45ರವರೆಗೆ ಹೆಚ್ಚಿನ ಸಂಬಳ ಪಡೆಯಲಿದ್ದಾರೆ. 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ,53 ಲಕ್ಷ ಕೇಂದ್ರದ ಪಿಂಚಣಿದಾರರು, ಸೇನಾ ವಲಯದ 14 ಲಕ್ಷ ಸಿಬ್ಬಂದಿಗೆ ಇದರ ಲಾಭಗಳಾಗಲಿದ್ದು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 30,748 ಕೋಟಿ ರು. ಹೊರೆ ಬೀಳಲಿದೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿಯ ಅನುಸಾರ ವೇತನ ಹೆಚ್ಚಳವಾಗಲಿದೆ. ಆದರೆ, ಕನಿಷ್ಟ ವೇತನ ಏರಿಕೆಯಾಗಿಲ್ಲ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ

2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ.

English summary
7th Pay Commission, Latest update: Now it is almost confirmed that the hike of 5 per cent in the DA would come only in September 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X