• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

2 ಸಾವಿರ ರು ವೇತನ ಏರಿಕೆಯ ನಿರೀಕ್ಷೆಯಲ್ಲಿ ಸರ್ಕಾರಿ ನೌಕರರು

By ವಿಕಾಸ್ ನಂಜಪ್ಪ
|

ನವದೆಹಲಿ, ಮೇ 27: ಲೋಕಸಭೆ ಚುನಾವಣೆ ಫಲಿತಾಂಶದಿಂದ ಕೇಂದ್ರ ಸರ್ಕಾರಿ ನೌಕರರು ಹಿಗ್ಗಿಲ್ಲ ಅಥವಾ ಕುಗ್ಗಿಲ್ಲ, ಬಹುಕಾಲದ ಬೇಡಿಕೆಗಳನ್ನು ಈ ಹಿಂದಿನ ಮೋದಿ ಸರ್ಕಾರವು ಪೂರ್ಣವಾಗಿ ಈಡೇರಿಸಿಲ್ಲದಿದ್ದರೂ, ಮೋದಿ 2.0 ಸರ್ಕಾರದ ಮೇಲೆ ಸಿಬ್ಬಂದಿ ಭರವಸೆ ಇಟ್ಟುಕೊಂಡಿದ್ದಾರೆ.

ಕೇಂದ್ರ ಸರ್ಕಾರಿ ನೌಕರರು 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕನಿಷ್ಠ ವೇತನವನ್ನು 18,000ರು ನಿಂದ 26,000 ರು ಗೇರಿಸುವಂತೆ ಕೋರಲಾಗಿದೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿ ಅನುಷ್ಠಾನವಾಗಲಿದ್ದು, ಆಯೋಗದ ಶಿಫಾರಸು ಮೀರಿ ಕನಿಷ್ಠ ವೇತನವನ್ನು 18,000 ರೂ.ನಿಂದ 21,000 ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇತ್ತು.

9 ಲಕ್ಷ ನೌಕರರಿಗೆ ಸಿಹಿ ಸುದ್ದಿ ನೀಡಿದ ಮೋದಿ ಸರ್ಕಾರ

ಆದರೆ, ಈ ಬಗ್ಗೆ ಯಾವುದೇ ಘೋಷಣೆಯಾಗಲಿಲ್ಲ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಗೊಂಡು ಯಾವುದೇ ಘೋಷಣೆಗೆ ಅವಕಾಶ ಸಿಗಲಿಲ್ಲ. ಹೀಗಾಗಿ, ಮೂಲ ವೇತನದಲ್ಲಿ ಎಷ್ಟು ಪ್ರಮಾಣ ಏರಿಕೆ ಬೇಡಿಕೆ ಹಾಗೆ ಉಳಿದಿದೆ. ಆದರೆ, ಒಟ್ಟಾರೆ ವೇತನದಲ್ಲಿ 2 ಸಾವಿರ ರು ಏರಿಕೆ ಸಾಧ್ಯತೆ ಬಗ್ಗೆ ಸುಳಿವು ಸಿಕ್ಕಿದೆ.

7ನೇ ವೇತನ ಆಯೋಗ ಏನು? ಏತ್ತ? ಯಾಕೆ? ಲೆಕ್ಕಾಚಾರ ಹೇಗೆ?

ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ವೇತನ ಏರಿಕೆ ಕುರಿತಂತೆ ಅಧಿಕಾರ ಜೊತೆ ಮಾತುಕತೆ ನಡೆಸಿರುವುದಾಗಿ ಹೇಳಿದ್ದಾರೆ. ಸರ್ಕಾರ ಈ ಬಗ್ಗೆ ಕೂಡಲೇ ಗಮನ ಹರಿಸಲಾಗುವುದು ಎಂದಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರಿ ನೌಕರರು ಆಶಾಭಾವನೆಯಿಂದ ಇದ್ದಾರೆ.

ತಕ್ಷಣವೇ ವೇತನ ಏರಿಕೆ ನಿರೀಕ್ಷೆ ಬೇಡ

ತಕ್ಷಣವೇ ವೇತನ ಏರಿಕೆ ನಿರೀಕ್ಷೆ ಬೇಡ

ಹೊಸ ಸರ್ಕಾರ ಸ್ಥಾಪನೆಯಾಗಿ ಸಂಪುಟ ಸಭೆ ನಡೆದು, ವೇತನ ಏರಿಕೆ ಆದೇಶ ಹೊರ ಬಂದು, ಸಿಬ್ಬಂದಿಗಳ ಕೈ ಸೇರಲು ಕನಿಷ್ಠ 4 ತಿಂಗಳಾದರೂ ಬೇಕು. ಕೇಂದ್ರ ಸರ್ಕಾರಿ ನೌಕರರ ಬೇಡಿಕೆಯ ಪಟ್ಟಿ ದೊಡ್ಡದಿದ್ದು, ಮೊದಲಿಗೆ ವೇತನ ಏರಿಕೆಯನ್ನು ಪರಿಗಣಿಸುವ ಸೂಚನೆ ಸಿಕ್ಕಿದೆ.ಆದರೆ, ನಿರೀಕ್ಷೆಯಂತೆ 8 ಸಾವಿರ ರು ವೇತನ ಏರಿಕೆ ಬದಲಿಗೆ 2 ಸಾವಿರ ರು ಏರಿಕೆ ಮಾತ್ರ ಸಿಗುವ ಸುಳಿವು ಸಿಕ್ಕಿದೆ. ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವುದು ಮೋದಿ ಸರ್ಕಾರದ ಆದ್ಯ ಕರ್ತವ್ಯ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಕನಿಷ್ಠ ವೇತನ ಏರಿಕೆ ಬೇಡಿಕೆ

ಕನಿಷ್ಠ ವೇತನ ಏರಿಕೆ ಬೇಡಿಕೆ

ಕನಿಷ್ಠ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಆದರೆ, ಲಭ್ಯ ಮಾಹಿತಿಯಂತೆ aykroyd ಫಾರ್ಮ್ಯೂಲಾದಂತೆ ಧೀರ್ಘಾವಧಿಗೆ ಜಾರಿಗೊಳಿಸಬಹುದು.

ನಿವೃತ್ತಿ ವಯಸ್ಸು ಏರಿಕೆ ಬಗ್ಗೆ ಕೂಡಾ ಬೇಡಿಕೆ

ನಿವೃತ್ತಿ ವಯಸ್ಸು ಏರಿಕೆ ಬಗ್ಗೆ ಕೂಡಾ ಬೇಡಿಕೆ

2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ. ಆದರೆ, ನಿವೃತ್ತಿ ವಯಸ್ಸು ಏರಿಕೆ ಬಗ್ಗೆ ಗೊಂದಲ ಮುಂದುವರೆದಿದೆ

ಬಹುಕಾಲದ ಬೇಡಿಕೆ- ವೇತನ ಏರಿಕೆ

ಬಹುಕಾಲದ ಬೇಡಿಕೆ- ವೇತನ ಏರಿಕೆ

ಕೆಳ ಹಂತದ ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಕನಿಷ್ಟ ವೇತನವನ್ನು ಪರಿಷ್ಕರಣೆ ಮಾಡಲಾಗುತ್ತಿದೆ. 7 ನೇ ವೇತನ ಆಯೋಗ ಮಾಡಿರುವ ಶಿಫಾರಸ್ಸು ಮೀರಿ ನೌಕರರಿಗೆ ಕನಿಷ್ಠ ವೇತನ ನಿಗದಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಅವರು ಸಂಸತ್ತಿನಲ್ಲಿ ಭರವಸೆ ನೀಡಿದ್ದರು. ಸಂಬಳದಾರ ಮಧ್ಯಮ ವರ್ಗದವರಿಗೆ ಬಜೆಟ್ 2018ರಲ್ಲಿ ಅರುಣ್ ಜೇಟ್ಲಿ ಏನು ಕೊಟ್ಟಿಲ್ಲ ಎಂಬ ದೊಡ್ಡ ಆರೋಪ ಕೇಳಿ ಬಂದಿತ್ತು. ಇದನ್ನು ಸರಿದೂಗಿಸಲು ಮೋದಿ ಸರ್ಕಾರವು ಈ ಬಾರಿ ಸಂಬಳದಾರರಿಗೆ ಸಂತಸದ ಸುದ್ದಿಯನ್ನು ನೀಡಿದ್ದರು. ಆದರೆ, ಕೇಂದ್ರ ಸರ್ಕಾರಿ ನೌಕರರರ ವೇತನ ಏರಿಕೆ ಬಗ್ಗೆ ಯಾವುದೇ ಹೇಳಿಕೆ ಇಲ್ಲ.

English summary
7th Pay Commission: Rs 2,000 pay hike? CG employees pin hopes on Rajnath’s hint. Although the previous government had really not given into the demands, CG employees could hope that the new dispensation is more accommodating in nature.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X