ಕೇಂದ್ರ ಸರ್ಕಾರದಿಂದ ಮುಂದಿನ ಡಿಎ ಹೆಚ್ಚಳ ನಿರೀಕ್ಷೆಯಷ್ಟು ದಕ್ಕಲ್ಲ

ನವದೆಹಲಿ, ಡಿಸೆಂಬರ್ 13: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಘೋಷಿಸಿದ್ದಾರೆ. ಆದರೆ ಮುಂದಿನ ಅವಧಿಯ ತುಟ್ಟಿಭತ್ಯೆ(ಡಿಎ) ಹೆಚ್ಚಳ ನಿರೀಕ್ಷಿಸಿದಷ್ಟು ಸಿಗುವುದಿಲ್ಲ ಎಂಬ ಮಾಹಿತಿ ಹೊರಬಂದಿದೆ.

ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ5 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು. ಆದರೆ, ಇದೆಲ್ಲವನ್ನು ಮೀರಿ ಮುಂದಿನ ಅವಧಿ ಜನವರಿ 2020ಕ್ಕೆ ಶೇ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ.

ಕಳೆದ ಅವಧಿಯ ಡಿಎ ಹೆಚ್ಚಳದಿಂದ ಕೇಂದ್ರ ಸರಕಾರದ ಮೇಲೆ 9000 ಕೋಟಿ ರುಪಾಯಿ ಹೆಚ್ಚುವರಿ ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟು ತುಟ್ಟಿಭತ್ಯೆ ಸಿಕ್ಕಿದೆ. ಆದರೆ, ಮುಂದಿನ ಅವಧಿಗೆ ಶೇ 4ರಷ್ಟು ಸಿಗುವುದು ಖಾತ್ರಿಯಾಗಿದೆ.

ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದಾಗ ಡಿಎ ಹಾಗೂ ತುಟ್ಟಿ ದರ (ಡಿಆರ್) ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಿದೆ. ಈಗ ಡಿಆರ್ ಶೇ17ರಷ್ಟಾಗಿದೆ.

ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ

ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ

ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆ ಬೇಡಿಕೆ ಇದ್ದೇ ಇದೆ. ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಇತಿಹಾಸ

ತುಟ್ಟಿಭತ್ಯೆ ಇತಿಹಾಸ

2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ. ಈಗ ತುಟ್ಟಿ ದರ (ಡಿಆರ್) ಈಗ ಶೇ 16ರಷ್ಟಾಗಿದೆ.

ವರ್ಷಕ್ಕೆ ಎರಡು ಬಾರಿ ಘೋಷಲಾಗುತ್ತದೆ. ಲೆಕ್ಕಾಚಾರ ಹೇಗೆ?

ವರ್ಷಕ್ಕೆ ಎರಡು ಬಾರಿ ಘೋಷಲಾಗುತ್ತದೆ. ಲೆಕ್ಕಾಚಾರ ಹೇಗೆ?

ಡಿಎ ವರ್ಷಕ್ಕೆ ಎರಡು ಬಾರಿ ಘೋಷಲಾಗುತ್ತದೆ. ಜನವರಿಯಿಂದ ಜೂನ್ ತಿಂಗಳು ಹಾಗೂ ಜುಲೈನಿಂದ ಡಿಸೆಂಬರ್ ಅವಧಿಗೆ ಲೆಕ್ಕ ಹಾಕಲಾಗುತ್ತದೆ. ಜನವರಿ 2020 ಅವಧಿಯ ಡಿಎ ಶೇ 4ರಷ್ಟು ಸಿಗಬಹುದು ಎಂಬ ಅಂದಾಜಿಸಲಾಗಿದೆ. ಜುಲೈ 2019 ರಿಂದ ಅಕ್ಟೋಬರ್ 2019ರ ಅವಧಿಯ ಹಣದುಬ್ಬರ ದರವನ್ನು ಡಿಎ ಹೆಚ್ಚಳ ಲೆಕ್ಕಾಚಾರಕ್ಕೆ ಪರಿಗಣಿಸಲಾಗುತ್ತದೆ.

ಕೇಂದ್ರ ಸರ್ಕಾರಿ ನೌಕರರ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕಳೆದ 12 ತಿಂಗಳಿಗೆ 115.76/115.76‍‍X100. ಸಾರ್ವಜನಿಕ ವಲಯದ ಸಿಬ್ಬಂದಿ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕೊನೆ 3 ತಿಂಗಳಿಗೆ 126.33/126.33‍‍X100.

ನಗರಗಳ ಆಧಾರದ ಮೇಲೆ ಸಂಬಳ

ನಗರಗಳ ಆಧಾರದ ಮೇಲೆ ಸಂಬಳ

ಕೇಂದ್ರ ಸರ್ಕಾರಿ ನೌಕರರು ತಾವಿರುವ ನಗರಗಳ ಆಧಾರದ ಮೇಲೆ ಶೇ. 45ರವರೆಗೆ ಹೆಚ್ಚಿನ ಸಂಬಳ ಪಡೆಯಲಿದ್ದಾರೆ. 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ,53 ಲಕ್ಷ ಕೇಂದ್ರದ ಪಿಂಚಣಿದಾರರು, ಸೇನಾ ವಲಯದ 14 ಲಕ್ಷ ಸಿಬ್ಬಂದಿಗೆ ಇದರ ಲಾಭಗಳಾಗಲಿದ್ದು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 30,748 ಕೋಟಿ ರು. ಹೊರೆ ಬೀಳಲಿದೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿಯ ಅನುಸಾರ ವೇತನ ಹೆಚ್ಚಳವಾಗಲಿದೆ. ಆದರೆ, ಕನಿಷ್ಟ ವೇತನ ಏರಿಕೆಯಾಗಿಲ್ಲ. ಲೆವೆಲ್ 01 ರಿಂದ ಲೆವೆಲ್ 18ರ ತನಕ ಸಮಾನ ಸ್ತರದಲ್ಲಿ ಅವರ ಸಂಬಳಕ್ಕೆ ತಕ್ಕಂತೆ ಡಿಎ ಹೆಚ್ಚಳ ಮಾಡುತ್ತಾ ಬರಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+