ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

|
Google Oneindia Kannada News

ನವದೆಹಲಿ, ಜುಲೈ 14: ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತಂತೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಸರ್ಕಾರಿ ನೌಕರರಿಗೆ ಶೇ 4ರಷ್ಟು ಡಿಎ ಹೆಚ್ಚಳಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಲಾಗಿದ್ದು, ಸದ್ಯದ ಮಾಹಿತಿಯಂತೆ ಡಿಎ ಶೇ 17ರಿಂದ ಶೇ 28ಕ್ಕೇರಿಕೆಯಾಗಿದೆ.

ಜುಲೈ 1ರಿಂದಲೇ ಅನ್ವಯವಾಗುವಂತೆ ಡಿಎ ಲಭಿಸಲಿದೆ. ಈ ಕುರಿತಂತೆ ಅಧಿಕೃತ ಆದೇಶ ಶೀಘ್ರದಲ್ಲೇ ಪ್ರಕಟವಾಗಲಿದೆ. ಕಳೆದ ಒಂದೂವರೆ ವರ್ಷಗಳಿಂದ ಡಿಎ ಹೆಚ್ಚಳ ಮಾಡಲಾಗಿಲ್ಲ.

ಜನವರಿ 1 (4%), ಜುಲೈ 1 2020(3%) ಹಾಗೂ ಜನವರಿ 1, 2021 (4%) ಗೆ ಮೂರು ಬಾರಿ ಏರಿಕೆಯಾಗಿ ಶೇ 25ಕ್ಕೇರಿದೆ. ಸೆಪ್ಟೆಂಬರ್ 1, 2021ಕ್ಕೆ ಪರಿಷ್ಕರಣೆಗೊಳ್ಳಲಿದೆ. ಆದರೆ, 18 ತಿಂಗಳ ಬಾಕಿ ಮೊತ್ತ ಸಿಗುವುದಿಲ್ಲ.

 7th Pay Commission: Union Govt hikes DA for central govt employees to 28%

ಡಿಎ ಹೆಚ್ಚಳ ಘೋಷಣೆ ಮಾಡಿದರೆ, ಕೇಂದ್ರ ಬೊಕ್ಕಸಕ್ಕೆ 12,150 ಕೋಟಿ ರು ಹೆಚ್ಚುವರಿ ಹೊರೆ ಬೀಳಲಿದೆ, ಕಳೆದ ಆರ್ಥಿಕ ವರ್ಷ 2020-21ರಲ್ಲಿ 14,595 ಕೋಟಿ ರು ನಷ್ಟಿತ್ತು. ಡಿಎ ಹೆಚ್ಚಳದಿಂದಾಗಿ 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65.26 ಲಕ್ಷ ಪಿಂಚಣಿದಾರರಿಗೆ ನೆರವು ಲಭಿಸಲಿದೆ.

ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿತ್ತು. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಇನ್ನೂ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ. ರೈಲ್ವೆ ಇಲಾಖೆಯಲ್ಲಿ ಮಾತ್ರ ಎರಡು ಪಾಳಿಯಲ್ಲಿ ಕೆಲಸ ಮಾಡಲು ಆದೇಶ ನೀಡಲಾಗಿದೆ.

ಸರ್ಕಾರಿ ನೌಕರರಿಗೆ ಡಬ್ಬಲ್ ಧಮಾಕ, ಡಿಎ, ಸಂಬಳ ಏರಿಕೆ! ಸರ್ಕಾರಿ ನೌಕರರಿಗೆ ಡಬ್ಬಲ್ ಧಮಾಕ, ಡಿಎ, ಸಂಬಳ ಏರಿಕೆ!

ಕೋವಿಡ್ -19 ಸಾಂಕ್ರಾಮಿಕದಿಂದಾಗಿ ಉದ್ಭವಿಸಿದ ಅಸಾಧಾರಣ ಪರಿಸ್ಥಿತಿಯಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಮೂರು ಹೆಚ್ಚುವರಿ ಕಂತುಗಳ ತುಟ್ಟಿ ಭತ್ಯೆ [ಡಿಎ] ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು [ಡಿಆರ್] 01.01.2020, 01.07.2020 ಮತ್ತು 01.01.2021, ಸ್ಥಗಿತಗೊಳಿಸಲಾಗಿತ್ತು.

''ಇದೀಗ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹಾಗೂ ಪಿಂಚಣಿದಾರರಿಗೆ ತುಟ್ಟಿ ಪರಿಹಾರ 01.07,2021 ರಿಂದ ಶೇ 28 ಕ್ಕೆ ಹೆಚ್ಚಳವಾಗಲಿದೆ. ಇದು ಪ್ರಸ್ತುತ ಇರುವ ಶೇ 11 ರಷ್ಟು ಮೂಲ ದರಕ್ಕಿಂತ ವೇತನ/ ಪಿಂಚಣಿಯ ಶೇ 17 ರಷ್ಟು ಹೆಚ್ಚಳವಾಗಲಿದೆ. 01.01.2020, 01.07.2020 ಮತ್ತು 01.01.2021 ರಂದು ಹೆಚ್ಚುವರಿ ಕಂತುಗಳಲ್ಲಿ ಇದು ದೊರೆಯಲಿದೆ. 01.01.2020 ರಿಂದ 30.06.2021 ರ ಅವಧಿಗೆ ತುಟ್ಟಿ ಭತ್ಯೆ / ಪರಿಹಾರ ದರ ಶೇ 17 ರಷ್ಟಿದೆ, '' ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

English summary
7th Pay Commission: Centre hikes DA for central govt employees from 17% to 28%. Central government employees will get the hiked DA benefit from September.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X