2020ರಲ್ಲಿ 7ನೇ ವೇತನ ಆಯೋಗದಿಂದ ನೌಕರರಿಗೇನು ನಿರೀಕ್ಷೆ?
ನವದೆಹಲಿ, ಜನವರಿ 03: 2020ರಲ್ಲಿ 7ನೇ ವೇತನ ಆಯೋಗ ಶಿಫಾರಸ್ಸಿನ ಅನ್ವಯ ಕೇಂದ್ರ ಸರ್ಕಾರಿ ನೌಕರರು ಏನೇನು ನಿರೀಕ್ಷಿಸಬಹುದು ಎಂಬುದರ ಬಗ್ಗೆ ಇಲ್ಲಿ ಬೆಳಕು ಚೆಲ್ಲಲಾಗಿದೆ. ಕಳೆದ ವರ್ಷ ವೇತನ ಸಂಹಿತೆಯ ಕರಡು ಪ್ರತಿ ಶಿಫಾರಸ್ಸಿನಲ್ಲಿ ಕೆಲಸದ ಅವಧಿ ಬಗ್ಗೆ ಬದಲಾವಣೆ ಇದ್ದರೂ ಕನಿಷ್ಠ ವೇತನದಲ್ಲಿ ಬದಲಾವಣೆ ಮಾಡಿಲ್ಲ.
7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರಿಗೆ 18,000 ರು ಕನಿಷ್ಠ ವೇತನ ಪ್ರತಿ ತಿಂಗಳಿಗೆ ಸಿಗಲಿದೆ. ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿದೆ. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ.
ರಾಷ್ಟ್ರೀಯ ಕನಿಷ್ಠ ವೇತನ (National minimum floor wage) ಬದಲಾವಣೆಗೆ ಸೂಚಿಸಿರುವ ಸಲಹಾ ಮಂಡಳಿಯ ಶಿಫಾರಸ್ಸಿನ ಅನ್ವಯ ಕೇಂದ್ರ ಸರ್ಕಾರಿ ನೌಕರರ ಸಂಬಳ ಶೇ28ರಷ್ಟು ಏರಿಕೆಯಾಗಲಿದೆ. ಇದನ್ನು ರಾಜ್ಯ ಸರ್ಕಾರಿ ನೌಕರರಿಗೂ ಹಂತ ಹಂತವಾಗಿ ಜಾರಿಗೊಳಿಸಲು ಸೂಚಿಸಲಾಗಿದೆ. 7ನೇ ವೇತನ ಆಯೋಗದ ಅನ್ವಯ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ, ಭತ್ಯೆ, ಕೆಲಸದ ಅವಧಿ, ರಜಾ ದಿನ ನಿಗದಿ ಮಾಡುವಂತೆ ಬೇಡಿಕೆ ಇದ್ದೆ ಇದೆ.

ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹೆಚ್ಚಳ
ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟು ತುಟ್ಟಿಭತ್ಯೆ ಸಿಗಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್(Non Product linked) ನೀಡಲಾಗಿದೆ. ಜನವರಿ 2020 ರಿಂದ ಜೂನ್ 2020 ರ ಅವಧಿಗೆ ಶೇ 4 ರಷ್ಟು ಡಿಎ ಹೆಚ್ಚಳ ನಿರೀಕ್ಷೆಯಿದೆ.

ಸಂಬಳ ಏರಿಕೆ ನಿರೀಕ್ಷೆಯಿದೆ
ಕೇಂದ್ರದ ಕಾರ್ಮಿಕ ಸಚಿವಾಲಯದ ಆಂತರಿಕ ಸಮಿತಿಯು ಜನವರಿಯಲ್ಲಿ ಬಿಡುಗಡೆ ಮಾಡಿದ ವರದಿಯಂತೆ, ಜುಲೈ 2018ರ ಪ್ರಕಾರ ಕನಿಷ್ಠ ವೇತನ 375 ರೂ., ಕನಿಷ್ಠ ಮಾಸಿಕ ವೇತನ 9,750 ರೂ ಹಾಗೂ ನಗರ ಮೂಲದ ಕಾರ್ಮಿಕರಿಗೆ 1,430 ರೂ. ವಸತಿ ಭತ್ಯೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಯಾವುದೇ ಸೂಚನೆ ಇಲ್ಲ. ಕೇಂದ್ರ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆ (Travel Allowance) ಕೂಡಾ ನೀಡಲಾಗುತ್ತಿದೆ. ಟಿಎ ಮೌಲ್ಯ ಸೇರಿಸಿದ ಬಳಿಕ ಸಂಬಳ 810 ರು ನಿಂದ 4,320ರುಗೇರಲಿದೆ. ಒಟ್ಟಾರೆ 720 ರು ನಿಂದ 10,000 ರು ತನಕ ಸಂಬಳ ಏರಿಕೆ ನಿರೀಕ್ಷೆಯಿದೆ.

ಕನಿಷ್ಟ ವೇತನ ಏರಿಕೆ ಸದ್ಯಕ್ಕಿಲ್ಲ?
ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆಯಿದೆ.

ಡಿಎ ಹೆಚ್ಚಳ ಏರಿಕೆ ನಂತರ ಲೆಕ್ಕಾಚಾರ
3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.
ಕೇಂದ್ರ ಸರ್ಕಾರಿ ನೌಕರರ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕಳೆದ 12 ತಿಂಗಳಿಗೆ 115.76/115.76X100. ಸಾರ್ವಜನಿಕ ವಲಯದ ಸಿಬ್ಬಂದಿ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕೊನೆ 3 ತಿಂಗಳಿಗೆ 126.33/126.33X100.

ಡಿಎ ಹೆಚ್ಚಳ ಇತಿಹಾಸ
2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಹಣದುಬ್ಬರ ದರ, ಗ್ರಾಹಕ ಸೂಚಿ ಆಧಾರದ ಮೇಲೆ ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಳ ಜಾರಿಗೊಳಿಸಲಾಗುತ್ತದೆ. 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ. ಈಗ ತುಟ್ಟಿ ದರ (ಡಿಆರ್) ಈಗ ಶೇ 16ರಷ್ಟಾಗಿದೆ.












Click it and Unblock the Notifications