ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರಿ ನೌಕರರಿಗೆ 8 ಸಾವಿರ ರು ಸಂಬಳ ಏರಿಕೆ?

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ನವೆಂಬರ್ 12: ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಬಗ್ಗೆ ಈಗಾಗಲೇ ಓದಿರುತ್ತೀರಿ. ಇನ್ನೇನು ತಿಂಗಳಾಂತ್ಯಕ್ಕೆ ಅಧಿಕೃತ ಆದೇಶ ಹೊರಬರಲಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರಿಗೆ 18,000 ರು ಕನಿಷ್ಠ ವೇತನ ಪ್ರತಿ ತಿಂಗಳಿಗೆ ಸಿಗಲಿದೆ. ಇದರ ಜೊತೆಗೆ ವೇತನ ಏರಿಕೆ ಪ್ರಮಾಣದ ಬಗ್ಗೆ ಕೂಡಾ ಮಾಹಿತಿ ಸಿಕ್ಕಿದೆ. ಕನಿಷ್ಠ 8 ಸಾವಿರ ರು ತನಕ ಸಂಬಳ ಹೆಚ್ಚಾಗುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್ (Non Product linked) ನೀಡಲಾಗಿದೆ. ಡಿಎ ಜೊತೆಗೆ ಟಿಎ ಸಿಕ್ಕಿದೆ. ಆದರೆ ಕನಿಷ್ಠ ವೇತನ ಏರಿಕೆ ಮಾಡಿಲ್ಲ. ಆದ್ದರಿಂದ 18,000 ರು ವೇತನಕ್ಕೆ ಅನುಗುಣವಾಗಿ ಲೆಕ್ಕ ಹಾಕಬೇಕಾಗುತ್ತದೆ.

ರಾಷ್ಟ್ರೀಯ ಸರಾಸರಿ ಕನಿಷ್ಠ ವೇತನ 4,628 ಪ್ರತಿ ತಿಂಗಳು ಎಂದು ನಿಗದಿಯಾಗಿತ್ತು. ಅಕ್ಟೋಬರ್ 18ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಂತೆ ದೆಹಲಿ ಸರ್ಕಾರವು ಈ ಪ್ರಮಾಣವನ್ನು 14,842 ರು ಗೇರಿಸಿತ್ತು.

ರಾಷ್ಟ್ರೀಯ ಕನಿಷ್ಠ ವೇತನ

ರಾಷ್ಟ್ರೀಯ ಕನಿಷ್ಠ ವೇತನ

ರಾಷ್ಟ್ರೀಯ ಕನಿಷ್ಠ ವೇತನ (National minimum floor wage) ಬದಲಾವಣೆಗೆ ಸೂಚಿಸಿರುವ ಸಲಹಾ ಮಂಡಳಿಯ ಶಿಫಾರಸ್ಸಿನ ಅನ್ವಯ ಕೇಂದ್ರ ಸರ್ಕಾರಿ ನೌಕರರ ಸಂಬಳ ಶೇ28ರಷ್ಟು ಏರಿಕೆಯಾಗಲಿದೆ. ಇದನ್ನು ರಾಜ್ಯ ಸರ್ಕಾರಿ ನೌಕರರಿಗೂ ಹಂತ ಹಂತವಾಗಿ ಜಾರಿಗೊಳಿಸಲು ಸೂಚಿಸಲಾಗಿದೆ. 7ನೇ ವೇತನ ಆಯೋಗದ ಅನ್ವಯ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ, ಭತ್ಯೆ, ಕೆಲಸದ ಅವಧಿ, ರಜಾ ದಿನ ನಿಗದಿ ಮಾಡುವಂತೆ ಬೇಡಿಕೆ ಇದ್ದೆ ಇದೆ.

ಸಚಿವಾಲಯದ ಆಂತರಿಕ ಸಮಿತಿ ವರದಿಯಂತೆ

ಸಚಿವಾಲಯದ ಆಂತರಿಕ ಸಮಿತಿ ವರದಿಯಂತೆ

ಕೇಂದ್ರದ ಕಾರ್ಮಿಕ ಸಚಿವಾಲಯದ ಆಂತರಿಕ ಸಮಿತಿಯು ಜನವರಿಯಲ್ಲಿ ಬಿಡುಗಡೆ ಮಾಡಿದ ವರದಿಯಂತೆ, ಜುಲೈ 2018ರ ಪ್ರಕಾರ ಕನಿಷ್ಠ ವೇತನ 375 ರೂ., ಕನಿಷ್ಠ ಮಾಸಿಕ ವೇತನ 9,750 ರೂ ಹಾಗೂ ನಗರ ಮೂಲದ ಕಾರ್ಮಿಕರಿಗೆ 1,430 ರೂ. ವಸತಿ ಭತ್ಯೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಯಾವುದೇ ಸೂಚನೆ ಇಲ್ಲ. ಕೇಂದ್ರ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆ (Travel Allowance) ಕೂಡಾ ನೀಡಲಾಗುತ್ತಿದೆ. ಟಿಎ ಮೌಲ್ಯ ಸೇರಿಸಿದ ಬಳಿಕ ಸಂಬಳ 810 ರು ನಿಂದ 4,320ರುಗೇರಲಿದೆ.

ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ ಬದಲಾವಣೆ

ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ ಬದಲಾವಣೆ

ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟು ತುಟ್ಟಿಭತ್ಯೆ ಸಿಗಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್(Non Product linked) ನೀಡಲಾಗಿದೆ.

ಕನಿಷ್ಟ ವೇತನ ಎಷ್ಟು ಪ್ರಮಾಣ ಏರಿಕೆ?

ಕನಿಷ್ಟ ವೇತನ ಎಷ್ಟು ಪ್ರಮಾಣ ಏರಿಕೆ?

ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆಯಿದೆ.

English summary
7th Pay Commission: Central Government employee will get a pay hike of upto Rs 8,000. This would also be made applicable to all government school and university teachers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X