ಭಾರತೀಯರಿಗೆ ಆಘಾತ; ಒಂದೇ ದಿನ 8,380 ಕೊರೊನಾ ವೈರಸ್ ಕೇಸ್!

ನವದೆಹಲಿ, ಮೇ.31: ಡ್ರ್ಯಾಗನ್ ರಾಷ್ಟ್ರ ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು ಭಾರತೀಯರನ್ನು ದಿನೇ ದಿನೆ ಆತಂಕಕ್ಕೆ ದೂಡುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 8,380 ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಇದುವರೆಗೂ ಪತ್ತೆಯಾಗಿರುವ ನೊವೆಲ್ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳಲ್ಲೇ ಇದು ಅತಿಹೆಚ್ಚು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೊರೊನಾ ವೈರಸ್ ಮಹಾಮಾರಿಗೆ 193 ಮಂದಿ ಪ್ರಾಣ ಬಿಟ್ಟಿದ್ದಾರೆ. ಆ ಮೂಲಕ ದೇಶದಲ್ಲಿ ಕೊವಿಡ್-19ಗೆ ಬಲಿಯಾದವರ ಸಂಖ್ಯೆಯು 5,164ಕ್ಕೆ ಏರಿಕೆಯಾಗಿದೆ.

8,380 New Coronavirus Cases Reported in India In Past 24 Hours

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಕೇಸ್:

ದೇಶದಲ್ಲಿ ಶನಿವಾರ ಒಂದೇ ದಿನ 8,380 ನೊವೆಲ್ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,82,143ಕ್ಕೆ ಏರಿಕೆಯಾಗಿದೆ. ಈ ಪೈಕಿ 86,984 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು, ಬಾಕಿ ಉಳಿದಿರುವ 89,995 ಕೊರೊನಾ ವೈರಸ್ ಸೋಂಕಿತರಿಗೆ ಐಸೋಲೇಟೆಡ್ ವಾರ್ಡ್ ಗಳಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+